ನೈಟ್ ಕರ್ಪ್ಯೂ ಹೇರಲು ನಿರ್ಧರಿಸಿಲ್ಲ: ಬೊಮ್ಮಾಯಿ
ಉಡುಪಿ: ಹೊಸವರ್ಷ ಆಚರಣೆ ಸಂದರ್ಭದಲ್ಲಿ ರಾಜ್ಯದಲ್ಲಿ ನೈಟ್ ಕರ್ಪ್ಯೂ ಹೇರುವ ಕುರಿತು ಯಾವುದೇ ನಿರ್ಧಾರ ಆಗಿಲ್ಲ. ಆದರೆ ತಜ್ಞರು ಹೆಚ್ಚು ಜನರು ಗುಂಪು ಸೇರಲು ಅವಕಾಶ ನೀಡಬಾರದೆಂದು ಸಲಹೆ ನೀಡಿದ್ದಾರೆ. ಹಾಗಾಗಿ ಇಂದು ಅಥವಾ ನಾಳೆ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಉಡುಪಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸವರ್ಷ ಆಚರಣೆ ಸಂದರ್ಭದಲ್ಲಿ ಜನಸಂದಣಿ ಆಗಬಾರದು. ಅದಕ್ಕೆ ನೈಟ್ ಕರ್ಪ್ಯೂ ಹೊರತುಪಡಿಸಿ ಯಾವುದೆಲ್ಲ ಕ್ರಮಗಳನ್ನು ಕೈಗೊಳ್ಳಬಹುದು ಎನ್ನುವುದರ […]