ಸೆ.29: ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಜೀರ್ಣೋದ್ಧಾರ; ಭೋಜನ ಶಾಲೆ ಉದ್ಘಾಟನೆ

ಉಡುಪಿ: ಜಿಲ್ಲೆಯ ಪ್ರಸಿದ್ದ ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಸೆ. 29ರಂದು ಭೋಜನ ಶಾಲೆ ಉದ್ಘಾಟನೆ ಮತ್ತು ಸಮಗ್ರ ಜೀರ್ಣೋದಾರಕ್ಕೆ ದಾರು ಹಾಗೂ ಶಿಲಾ ಮುಹೂರ್ತ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಜನಪ್ರತಿನಿಧಿಗಳು, ಹಾಗೂ ವಿವಿಧ ಗಣ್ಯರು ಭಾಗವಹಿಸಲಿದ್ದಾರೆ. ಶರನವರಾತ್ರಿ ಮಹೋತ್ಸವ: ಶ್ರೀ ಕ್ಷೇತ್ರದಲ್ಲಿ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 8 ರವರೆಗೆ ಶರನವರಾತ್ರಿ ಮಹೋತ್ಸವ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಗಳು ಪ್ರತಿನಿತ್ಯ […]