ನಿಟ್ಟೆ: ಎನ್.ಐ.ಆರ್.ಎಫ್ ಪ್ರಾಮುಖ್ಯತೆ ಕುರಿತು ಕಾರ್ಯಾಗಾರ

ನಿಟ್ಟೆ: ನಿಟ್ಟೆ ವಿಶ್ವವಿದ್ಯಾಲಯದ ಅಂಗ ಸಂಸ್ಥೆಯಾದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆ.25 ರಂದು ನಡೆದ ಒಂದು ದಿನದ ಎನ್.ಐ.ಆರ್.ಎಫ್ ಶ್ರೇಯಾಂಕ ಕುರಿತಾದ ಕಾರ್ಯಾಗಾರ ನಡೆಯಿತು. ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಕೆ. ಬಲವೀರ ರೆಡ್ಡಿ, ದೇಶದ ಅಭಿವೃದ್ದಿಯಲ್ಲಿ ಶಿಕ್ಷಣ ಕ್ಷೇತ್ರ ಅತಿ ಪ್ರಾಮುಖ್ಯತೆಯನ್ನು ಪಡೆದಿದೆ. ಶಿಕ್ಷಣದ ಗುಣಮಟ್ಟ ಉತ್ತಮವಾಗಿದ್ದರೆ ಸಮಾಜದ ಏಳಿಗೆ ಕ್ಷಿಪ್ರವಾಗಲಿದೆ ಎಂದು  ಅಭಿಪ್ರಾಯಪಟ್ಟರು. ಶಿಕ್ಷಣ ಸಂಸ್ಥೆಗಳ ಗುಣಮಟ್ಟ ಮೌಲ್ಯಮಾಪನಕ್ಕಾಗಿ ನ್ಯಾಕ್, […]