ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 55 ಲಕ್ಷ ಉದ್ಯೋಗಾವಕಾಶ ಸೃಜನೆ; ಐದು ಇಂಟಿಗ್ರೇಟೆಡ್ ಅಕ್ವಾ ಪಾರ್ಕ್ ಸ್ಥಾಪನೆ
ನವದೆಹಲಿ: ಗುರುವಾರದಂದು ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೀನುಗಾರಿಕಾ ಕ್ಷೇತ್ರಕ್ಕೆ ನೀಡಲಾದ ಪ್ರೋತ್ಸಾಹದ ಬಗ್ಗೆ ಸದನಕ್ಕೆ ತಿಳಿಸಿದರು. “ಮೀನುಗಾರರಿಗೆ ಸಹಾಯ ಮಾಡುವ ಮಹತ್ವವನ್ನು ಅರಿತು ಮೀನುಗಾರಿಕೆಗಾಗಿ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಇದು ಒಳನಾಡು ಮತ್ತು ಜಲಚರಗಳ ಉತ್ಪಾದನೆಯನ್ನು ದ್ವಿಗುಣಗೊಳಿಸಿದೆ. 2013-14 ರಿಂದ ಸಮುದ್ರಾಹಾರ ರಫ್ತು ಕೂಡ ದ್ವಿಗುಣಗೊಂಡಿದೆ. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (PMMSY) ಅನುಷ್ಠಾನವನ್ನು ಪ್ರತಿ ಹೆಕ್ಟೇರ್‌ಗೆ 3 ರಿಂದ 5 ಟನ್ ಗಳವರೆಗೆ ಜಲಕೃಷಿ […]
2014 ರ ಮೊದಲಿನ ಆರ್ಥಿಕತೆಯ ದುರುಪಯೋಗದ ಬಗ್ಗೆ ಶ್ವೇತಪತ್ರ ಮಂಡನೆ; ಆದಾಯ ತೆರಿಗೆ ಯಥಾಸ್ಥಿತಿ, ಆವಾಸ್ ಯೋಜನೆ-ಆಯುಷ್ಮಾನ್ ಭಾರತ್ ವಿಸ್ತರಣೆ
ನವದೆಹಲಿ: ಆರನೇ ಬಾರಿ ಬಜೆಟ್ ಮಂಡಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆಯು ಆಳವಾದ ಪ್ರಸರಣವನ್ನು ಕಂಡಿದೆ. ಅತ್ಯದ್ಭುತ ಕೆಲಸದ ಆಧಾರದ ಮೇಲೆ, ನಮ್ಮ ಸರ್ಕಾರವು ಮತ್ತೊಮ್ಮೆ ಜನಾದೇಶದೊಂದಿಗೆ ಜನರಿಂದ ಆಶೀರ್ವದಿಸಲ್ಪಡುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ ಎಂದರು. ಹಿಂದಿನ ಬದ್ಧತೆಯನ್ನು ಪುನರುಚ್ಚರಿಸಿದ ಸಚಿವೆ 2047 ರ ವೇಳೆಗೆ ವಿಕಸಿತ ಭಾರತವನ್ನಾಗಿ ಮಾಡಲು ಸರ್ಕಾರ ಕೆಲಸ ಮಾಡುತ್ತಿದೆ ಎಂದು ಹೇಳಿದರು. 2014 ರ ಮೊದಲು ಆರ್ಥಿಕತೆಯ ದುರುಪಯೋಗದ ಬಗ್ಗೆ ಮೋದಿ ಸರ್ಕಾರವು ಸಂಸತ್ತಿನಲ್ಲಿ […]
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಮಗಳ ಸರಳ ವಿವಾಹ
ಬೆಂಗಳೂರು: ಉಡುಪಿ ಶ್ರೀ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರ ಶಿಷ್ಯೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರ ಪುತ್ರಿ ವಾಙ್ಮಯಿ ಮತ್ತು ಪ್ರತೀಕ್ ಇವರ ವಿವಾಹ ಬೆಂಗಳೂರಿನ ಟ್ಯಾಮರಿಂಡ್ ಟ್ರೀ ನಲ್ಲಿ ಜೂನ್ 7 ರಂದು ನೆರವೇರಿತು. ಕೌಟುಂಬಿಕ ಸದಸ್ಯರು ಮಾತ್ರ ಹಾಜರಿದ್ದ ಈ ಸಮಾರಂಭದಲ್ಲಿ ಅದಮಾರು ಮಠದ ವಿಶ್ವಪ್ರಿಯ ತೀರ್ಥ ಶ್ರೀಪಾದರು ಮತ್ತು ಈಶಪ್ರಿಯ ತೀರ್ಥ ಶ್ರೀಪಾದರು ವಧೂ ವರರಿಗೆ ಹರಸಿ ಕಳುಹಿಸಿದ ಮಧುಪರ್ಕ, ಸೀರೆ, ಶಾಲು, ಗಂಧ ಪ್ರಸಾದವನ್ನು ಮತ್ತು ಶ್ರೀಕೃಷ್ಣನಿಗೆ […]
ಸಾರ್ವಕಾಲಿಕ ಗರಿಷ್ಠ ಜಿಎಸ್‌ಟಿ ಸಂಗ್ರಹಣೆ: ಶೇ 12 ರಷ್ಟು ಏರಿಕೆ; 1.87 ಲಕ್ಷ ಕೋಟಿ ರೂ ಸಂಗ್ರಹಣೆ
ನವದೆಹಲಿ: ಒಟ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಆದಾಯ ಸಂಗ್ರಹವು ಏಪ್ರಿಲ್‌ನಲ್ಲಿ ಶೇ 12 ರಷ್ಟು ಏರಿಕೆಯಾಗಿ 1.87 ಲಕ್ಷ ಕೋಟಿ ರೂ ಸಂಗ್ರಹಣೆಯಾಗಿದೆ. ಜುಲೈ 2017 ರಲ್ಲಿ ಜಿಎಸ್‌ಟಿ ಅನ್ನು ಬಿಡುಗಡೆ ಮಾಡಿದ ನಂತರ ಇದು ಅತ್ಯಧಿಕ ಮಾಸಿಕ ಮಾಪ್-ಅಪ್ ಆಗಿದೆ. 20 ಏಪ್ರಿಲ್ 2023 ರಂದು 9.8 ಲಕ್ಷ ವಹಿವಾಟುಗಳ ಮೂಲಕ ಒಂದೇ ದಿನದಲ್ಲಿ ಸಂಗ್ರಹಿಸಲಾದ ಅತಿ ಹೆಚ್ಚು ತೆರಿಗೆ 68,228 ಕೋಟಿ ರೂಪಾಯಿ. ಹಣಕಾಸು ಸಚಿವಾಲಯದ ಹೇಳಿಕೆಯ ಪ್ರಕಾರ, 1,87,035 ಕೋಟಿಗಳ […]
ಆದಾಯ ತೆರಿಗೆ ಹಳೆಯ ಪದ್ಧತಿ: ಐಟಿಆರ್ ಸಲ್ಲಿಸುವ ಮೊದಲು ಈ ಕಡಿತವನ್ನು ತಿಳಿದುಕೊಳ್ಳಿ
ಆದಾಯ ತೆರಿಗೆ: ಫೆಬ್ರವರಿ 1 ರಂದು ಕೇಂದ್ರ ಬಜೆಟ್ ಮಂಡಿಸುವಾಗ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವೈಯಕ್ತಿಕ ಆದಾಯ ತೆರಿಗೆಯ ಹೊಸ ಪದ್ದತಿಯಲ್ಲಿ ಕೆಲವು ಬದಲಾವಣೆಗಳನ್ನು ಘೋಷಿಸಿದ್ದರು. ಸರ್ಕಾರ ಜಾರಿಗೆ ತಂದಿರುವ ಹೊಸ ತೆರಿಗೆ ಪದ್ಧತಿಯು 2023-24ನೇ ಹಣಕಾಸು ವರ್ಷದಿಂದ ಡೀಫಾಲ್ಟ್ (ಪೂರ್ವ ನಿಯೋಜಿತ) ಆಗಿರುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ತಮ್ಮ ತೆರಿಗೆ ಪ್ರಯೋಜನಗಳನ್ನು ಉಳಿಸಿಕೊಳ್ಳಲು ಹಳೆಯ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಲು ಬಯಸುವ ತೆರಿಗೆದಾರರು ಅದರ ಬಗ್ಗೆ ಘೋಷಣೆಯನ್ನು ಮಾಡಬೇಕು. ಆದರೆ ನೀವು ಹಳೆಯ […]