ಬ್ಯಾಂಕ್ ವಿಲೀನ ಪ್ರಕ್ರಿಯೆ, ಉದ್ಯೋಗ ಕಡಿತದ ಭೀತಿ ಬೇಡ: ನಿರ್ಮಲಾ ಸೀತಾರಾಮನ್

ಹೊಸದಿಲ್ಲಿ: ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳ ಪೈಕಿ ಬ್ಯಾಂಕ್ ವಿಲೀನ ಪ್ರಕ್ರಿಯೆಯೂ ಸೇರಿದೆ. ಹೀಗಾಗಿ, ಸಾರ್ವಜನಿಕ ವಲಯದ ಬ್ಯಾಂಕ್’ಗಳ ವಿಲೀನದಿಂದ ಒಂದೇ ಒಂದು ಉದ್ಯೋಗವೂ ನಷ್ಟವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಈ ಕ್ರಮದಿಂದ ಬ್ಯಾಂಕ್ ಉದ್ಯೋಗಿಗಳಿಗೆ ಕೆಲಸ ಕಳೆದಕೊಳ್ಳುವ ಭಯ ಕಾಡುತ್ತಿದ್ದು, ಬ್ಯಾಂಕ್’ಗಳ ವಿಲೀನದಿಂದ ಉದ್ಯೋಗ ನಷ್ಟವಾಗುವುದಿಲ್ಲ. ಯಾವ ಉದ್ಯೋಗಿಯನ್ನೂ ಮನೆಗೆ ಕಳುಹಿಸುವುದಿಲ್ಲ ಎಂದು ವಿತ್ತ ಸಚಿವೆ ಭರವಸೆ ನೀಡಿದ್ದಾರೆ. ಈ ಹಿಂದೆ […]