ಸೆ.29 : ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪದವಿ ಪ್ರಧಾನ

ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2018-19 ನೇ ಶೈಕ್ಷಣಿಕ ಸಾಲಿನ ಪದವಿಪ್ರದಾನ ಸಮಾರಂಭವು ಸಪ್ಟೆಂಬರ್29 ರಂದು ಬೆಳಗ್ಗೆ 10 ಗಂಟೆಗೆ ನಿಟ್ಟೆಯ ಸದಾನಂದ ಸಭಾಂಗಣದಲ್ಲಿ ನಡೆಯಲಿದೆ. ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್ ಮುಖ್ಯ ಅತಿಥಿಗಳಾಗಿ ಆಗಮಿಸಲಿರುವರು. ನಿಟ್ಟೆ ಎಜುಕೇಶನ್ ಟ್ರಸ್ಟ್‌ನ ಅಧ್ಯಕ್ಷ ಎನ್ ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಲಿರುವರು. ಈ ಪದವಿಪ್ರದಾನ ಸಮಾರಂಭದಲ್ಲಿ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಬಿ.ಇ, ಎಂ.ಟೆಕ್ ಹಾಗೂ ಎಂ.ಸಿ.ಎ ವಿದ್ಯಾರ್ಥಿಗಳಿಗೆ ಪದವಿಪ್ರದಾನ ಮಾಡಲಾಗುವುದು ಹಾಗೂ ಶೈಕ್ಷಣಿಕ ಸಾಧನೆಗೈದ […]