ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಎನ್. ವಿನಯ ಹೆಗ್ಡೆ ನಿಧನ.

ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ವಿನಯ್ ಹೆಗ್ಡೆ (83) ಹೃದಯಾಘಾತದಿಂದ ಗುರುವಾರ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮೃತದೇಹದ ಸಾರ್ವಜನಿಕ ದರ್ಶನಕ್ಕೆ ಇಲ್ಲಿನ ಶಿವಭಾಗ್‌ನಲ್ಲಿರುವ ಅವರ ನಿವಾಸದಲ್ಲಿ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಹಾಗೂ ದೇರಳಕಟ್ಟೆಯ ನಿಟ್ಟೆ ಕ್ಯಾಂಪಸ್‌ನಲ್ಲಿ ಸಂಜೆ 4.30ರಿಂದ 6 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ ದಿ. ಕೆ.ಎಸ್. ಹೆಗ್ಡೆ ಅವರ ಎರಡನೇ ಪುತ್ರ ವಿನಯ್ ಹೆಗ್ಡೆ ಅವರು […]