ನಿಟ್ಟೆ ತಾಂತ್ರಿಕ ಕಾಲೇಜಿನಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ಕಾರ್ಕಳ: ವಿಜ್ಞಾನ ಹಾಗೂ ತಂತ್ರಜ್ಞಾನ ಇವೆರಡೂ ಒಂದೇ ನಾಣ್ಯದ ಎರಡು ಪ್ರಮುಖ ಭಾಗಗಳಿದ್ದಂತೆ. ಒಂದನ್ನು ಹೊರತುಪಡಿಸಿ ಇನ್ನೊಂದು ಅಭಿವೃದ್ಧಿ ಕಾಣಲು ಅಸಾಧ್ಯ” ಎಂದು ಪುಣೆಯ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್‌ಎಜುಕೇಶನ್ & ರಿಸರ್ಚ್ ಸಂಸ್ಥೆಯ ಭೌತಶಾಸ್ತ್ರ ವಿಭಾಗದ ಪ್ರೊಫೆಸರ್ ಡಾ. ಟಿ.ಎಸ್. ಮಹೇಶ್ ಅಭಿಪ್ರಾಯಪಟ್ಟರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಭಾಗದ ವತಿಯಿಂದ ಫೆ.೨೮ ರಂದು ನಡೆದ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ […]