ನಿಟ್ಟೆ ಮಹಾವಿದ್ಯಾಲಯದ ಡಾ. ಶ್ರೀಕಾಂತ್ ದೇಸಾಯಿಗೆ ‘ಬೆಸ್ಟ್ ರಿಸರ್ಚ್ ಪಬ್ಲಿಕೇಶನ್’ ಪ್ರಶಸ್ತಿ

ನಿಟ್ಟೆ: ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್‌ ಸೈನ್ಸ್ ವಿಭಾಗದ ಪ್ರಾಧ್ಯಾಪಕ ಡಾ. ಶ್ರೀಕಾಂತ್ ದೇಸಾಯಿ .ಕೆ ಇವರಿಗೆ ಕರ್ನಾಟಕ ಸರ್ಕಾರದ ವಿಶನ್ ಗ್ರೂಪ್ ಆನ್ ಸೈನ್ಸ್ & ಟೆಕ್ನಾಲಜಿ (ವಿ.ಜಿ.ಎಸ್.ಟಿ) ಸಂಸ್ಥೆಯ ವತಿಯಿಂದ ಅವರ ಸಂಶೋಧನಾ ಪ್ರಕಟಣೆಗೆ ‘ಬೆಸ್ಟ್ ರಿಸರ್ಚ್ ಪಬ್ಲಿಕೇಶನ್’ ಪ್ರಶಸ್ತಿ ಲಭಿಸಿದೆ. ಉನ್ನತ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಶ್ವಥ್ ನಾರಾಯಣ್ ಪ್ರಶಸ್ತಿ ಪ್ರದಾನ ಮಾಡಿದರು.  

ನಿಟ್ಟೆ ಮಾನವಿಕ ವಿಭಾಗದಿಂದ ಆಶಾ ಕಾರ್ಯಕರ್ತೆಯರಿಗೆ ಕಾರ್ಯಾಗಾರ

ನಿಟ್ಟೆ: ಏ.28 ರಂದುನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾನವಿಕ ವಿಭಾಗದ ವತಿಯಿಂದ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಹರೀಶ್ ಆಚಾರ್ಯ ಹಾಗೂ ಎನ್.ಸಿ.ಡಿ ವೈದ್ಯಾಧಿಕಾರಿ ಡಾ. ನಿಖಿಲ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ವಹಿಸಿದ್ದರು. ಒಂದು ದಿನದ ಕಾರ್ಯಾಗಾರದಲ್ಲಿ ನಿಟ್ಟೆ ಸಮುದಾಯ […]

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಕ್ರೀಡಾಕೂಟಕ್ಕೆ ಚಾಲನೆ

ನಿಟ್ಟೆ: ವಿದ್ಯಾರ್ಥಿದೆಸೆಯಲ್ಲಿ ಕ್ರೀಡೆಗೆ ಉತ್ತಮ ಪ್ರೋತ್ಸಾಹ ಸಿಕ್ಕರಷ್ಟೇ ಭವಿಷ್ಯದಲ್ಲಿ ಉತ್ತಮ ಕ್ರೀಡಾಪಟುವಾಗಲು ಸಾಧ್ಯ. ಕ್ರೀಡೆಯೆಂಬುದು ಸ್ನೇಹಕ್ಕಾಗಿ ಹಾಗೂ ವಿನೋದಕ್ಕಾಗಿಯೂ ಆಡಬಹುದು ಎಂಬುದನ್ನು ಮನಸ್ಸಿನಲ್ಲಿ ಇಟ್ಟುಕೊಂಡರೆ ನಿರಾಸೆಯೆಂಬ ಅಂಶ ನಮ್ಮೊಳಗೆ ಸೇರುವುದಿಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯದ ಕ್ರಿಕೆಟ್ ತಂಡದ ಮಾಜಿ ಕ್ಯಾಪ್ಟನ್, ವಿಜಯ ಆಳ್ವ ಅಭಿಪ್ರಾಯಪಟ್ಟರು. ಗುರುವಾರದಂದು ಎನ್.ಇ.ಟಿ ಕ್ಯಾಂಪಸ್‌ನ ಬಿ.ಸಿ.ಆಳ್ವಾ ಕ್ರೀಡಾ ಸಂಕೀರ್ಣದಲ್ಲಿ ನಡೆದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 36 ನೇ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ಪರ್ಧೆ ಅಂದಮೇಲೆ […]

ನಿಟ್ಟೆ: ಮಲೇರಿಯಾ ವಿರೋಧಿ ದಿನಾಚರಣೆ

ಉಡುಪಿ, ಜುಲೈ 1: ನಿಟ್ಟೆ ಡಾ.ಎನ್.ಎಸ್.ಎ.ಎಂ ಪ್ರೌಢಶಾಲೆಯಲ್ಲಿ ಮಲೇರಿಯಾ ವಿರೋಧಿ ದಿನಾಚರಣೆ ಜೂನ್ 29 ರಂದು ಜರುಗಿತು. ತಾಲೂಕು ಪಂಚಾಯತ್ ಅಧ್ಯಕ್ಷೆ ಮಾಲಿನಿ ಜೆ.ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿ, ಮಲೇರಿಯಾ ಸೊಳ್ಳೆಗಳಿಂದ ಹರುಡುವ ರೋಗವಾಗಿರುವ ಕಾರಣ ಸೊಳ್ಳೆ ಉತ್ಪತ್ತಿಯಾಗುವ ಮೂಲಗಳನ್ನು ಕಂಡು ತಕ್ಷಣವೇ ಲಾರ್ವ ನಾಶ ಮಾಡುವಂತೆ, ಸ್ವಚ್ಛತೆಯ ಬಗ್ಗೆ ಹೆಚ್ಚಿನ ಕ್ರಮ ವಹಿಸುವಂತೆ, ಪರಿಸರ ನೈರ್ಮಲ್ಯವನ್ನು ಕಾಪಾಡಿಕೊಂಡು ಸೊಳ್ಳೆಗಳಿಂದ ಹರಡುವ ಕಾಯಿಲೆಗಳ ಬಗ್ಗೆ ಎಲ್ಲರಿಗೂ ಮಾಹಿತಿ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿಲ್ಲಾ ಪಂಚಾಯತ್ ಸದಸ್ಯೆ […]