ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಎರಡು ಜೋಡಿಗಳಿಗೆ ಕೂಡಿ ಬಂತು ಕಂಕಣ ಭಾಗ್ಯ
ಉಡುಪಿ: ನಿಟ್ಟೂರಿನ ರಾಜ್ಯ ಮಹಿಳಾ ನಿಲಯದಲ್ಲಿ ಡಿಸೆಂಬರ್ 19 ರ ಸಂಜೆ ಮಂಗಳವಾರದಿಂದ ಬುಧವಾರ ಮಧ್ಯಾಹ್ನದವರೆಗೆ ಮದುವೆ ಸಂಭ್ರಮ ಕಳೆ ಕಟ್ಟಿತ್ತು. ಸಂಜೆ ಮೆಹಂದಿ ಕಾರ್ಯಕ್ರಮ ನಡೆದರೆ, ಬೆಳಗ್ಗೆ ಎರಡು ಜೋಡಿಗಳ ವಿವಾಹ ಮಹೋತ್ಸವವು ಅಧಿಕಾರಿಗಳು, ಗಣ್ಯರು ಹಾಗೂ ಕುಟುಂಬಸ್ಥರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ನಡೆಯಿತು. ವಿವಾಹ ನಿಶ್ಚಯ ಕಾರ್ಯಕ್ರಮ ಜಿಲ್ಲಾಡಳಿತದ ನೇತೃತ್ವದಲ್ಲಿ ಕಳೆದ ಎರಡು ತಿಂಗಳಿನಿಂದ ವರರ ಆರೋಗ್ಯ, ಗುಣ ನಡತೆ, ಅವರ ಆದಾಯ ಮತ್ತಿತರ ವಿವರಗಳನ್ನು ಕಲೆ ಹಾಕುವುದರೊಂದಿಗೆ ಜಿಲ್ಲಾಡಳಿತ, ವರಂದಿರ ಗುರು ಹಿರಿಯರು ಒಪ್ಪಿಗೆನೀಡಿದರು. […]