ನಿಟ್ಟೂರು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಶಿಕ್ಷಕರಿಗೆ ಅಭಿನಂದನೆ

ಉಡುಪಿ: ಸುವರ್ಣ ಸಂಭ್ರಮದಲ್ಲಿರುವ ನಿಟ್ಟೂರು ಪ್ರೌಢಶಾಲೆಯಲ್ಲಿ ವಿದ್ಯಾರ್ಜನೆಗೈದು ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಸುಮಾರು 60ಕ್ಕೂ ಹೆಚ್ಚು ಹಳೆವಿದ್ಯಾರ್ಥಿ ಶಿಕ್ಷಕರನ್ನು ಶಾಲಾ ರಜತ ಸಭಾಭವನದಲ್ಲಿ ಶಾಲಾ ಹಳೆವಿದ್ಯಾರ್ಥಿ ಸಂಘದ ವತಿಯಿಂದ ಅಭಿನಂದಿಸುವ ಹೃದಯಸ್ಪರ್ಶಿ ಕಾರ್ಯಕ್ರಮ ಜರಗಿತು. ಪೂರ್ಣಪ್ರಜ್ಞ ಕಾಲೇಜೀನ ನಿವೃತ್ತ ಉಪನ್ಯಾಸಕ ಡಾ| ಬಿ.ಎಂ. ಸೋಮಯಾಜಿ ಅಧ್ಯಕ್ಷತೆಯಲ್ಲಿ ಹಳೆವಿದ್ಯಾರ್ಥಿ ಶಿಕ್ಷಕರನ್ನು ಅಭಿನಂದಿಸಲಾಯಿತು. ಶಿಕ್ಷಕರನ್ನು ಅಭಿನಂದಿಸಿದ ಡಾ| ಬಿ.ಎಂ. ಸೋಮಯಾಜಿ ಮಾತನಾಡಿ, ಶಿಕ್ಷಕ ವೃತ್ತಿ ಪವಿತ್ರವಾದದ್ದು, ಸದಾ ಕಲಿಯುವ ತುಡಿತ ಮತ್ತು ವಿದ್ಯಾರ್ಥಿ ಪ್ರೀತಿ ಶಿಕ್ಷಕರಲ್ಲಿ […]