ನಿರುದ್ಯೋಗ ಸಮಸ್ಯೆಗೆ ಮುಕ್ತಿ ಹಾಡಲು ಪ್ರತಿ ತಿಂಗಳು ಉದ್ಯೋಗ ಮೇಳ: ವಿಜಯ್ ಕೊಡವೂರು

ಉಡುಪಿ: ಜಗದ್ಗುರು ಶ್ರೀ ನಿತ್ಯಾನಂದ ಸ್ವಾಮಿ ದೇವಸ್ಥಾನ ಮಠದ ಆಶ್ರಯದಲ್ಲಿ ರಾಷ್ಟ್ರೀಯ ಪದವಿಪೂರ್ವ ವಿದ್ಯಾರ್ಥಿಗಳ ಪೋಷಕರ ಮತ್ತು ಶಿಕ್ಷಕರ ಸಂಘ, ಸ್ವಾವಲಂಬಿ ಭಾರತ ಮತ್ತು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ ಜಂಟಿ ಸಹಯೋಗದಲ್ಲಿ ಭಾನುವಾರದಂದು ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿತ್ತು. ಉಡುಪಿ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯ ಅಧ್ಯಕ್ಷ ಅಂಡಾರು ದೇವಿಪ್ರಸಾದ್ ಶೆಟ್ಟಿ ಉದ್ಯೋಗ ಮೇಳವನ್ನು ಉದ್ಘಾಟಿಸಿ, ಉದ್ಯೋಗ ಅರಸುವ ಜೊತೆ ಸ್ವಉದ್ಯೋಗ ನಡೆಸುವ ಬಗ್ಗೆ ಕೂಡ ಆಸಕ್ತರಾಗುವಂತೆ […]