ದಶಕಗಳ ಬಳಿಕ ಕೇರಳದಲ್ಲಿ ಮತ್ತೆ ಕಾಣಿಸಿಕೊಂಡ ಲೈಮ್ ಡಿಸೀಸ್: ಬ್ಯಾಕ್ಟೀರಿಯಾದಿಂದ ಹರಡುವ ರೋಗದ ಲಕ್ಷಣಗಳ ಬಗ್ಗೆ ತಿಳಿದುಕೊಳ್ಳಿ

ತಿರುವನಂತಪುರ: ಬರೋಬ್ಬರಿ ಹತ್ತು ವರ್ಷದ ಬಳಿಕ ಕೇರಳ ರಾಜ್ಯದ ಎರ್ನಾಕುಳಂನಲ್ಲಿ ಲೈಮ್ ಡಿಸೀಸ್ (Lyme Disease) ಪತ್ತೆಯಾಗಿದೆ. ಅತ್ಯಂತ ಅಪರೂಪದ ಈ ಕಾಯಿಲೆ ಬೊರೆಲಿಯಾ ಬರ್ಗ್‌ಡೋರ್‍ಫೆರಿ ಎಂಬ ಬ್ಯಾಕ್ಟೀರಿಯಾ ಮೂಲಕ ಹರಡುತ್ತಿದ್ದು, ಇಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ 56 ವರ್ಷದ ವ್ಯಕ್ತಿಯೊಬ್ಬರಲ್ಲಿ ಈ ರೋಗವನ್ನು ವೈದ್ಯರು ದೃಢಪಡಿಸಿದ್ದಾರೆ. ತೀವ್ರ ರೀತಿಯ ಜ್ವರ, ಮೊಣಕಾಲಿನ ಊತದಿಂದ ಡಿಸೆಂಬರ್ ತಿಂಗಳಿನಲ್ಲಿ ಈ ರೋಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕದ ದಿನಗಳಲ್ಲಿ ಅವರಿಗೆ ಅಪಸ್ಮಾರದ ಲಕ್ಷಣ ಕಾಣಿಸಿಕೊಂಡಿತ್ತು. ಬಹಳಷ್ಟು ಚಿಕಿತ್ಸೆ ಬಳಿಕವೂ ಗುಣಮುಖವಾಗದ […]

ಸೆ.28 ರಂದು ‘ದಿ ವ್ಯಾಕ್ಸಿನ್ ವಾರ್’ ಚಿತ್ರ ತೆರೆಗೆ: ಮೊಟ್ಟ ಮೊದಲ ಬಯೋ ಸೈನ್ಸ್ ಚಿತ್ರ ದೇಶದ ಮಹಿಳಾ ವಿಜ್ಞಾನಿಗಳಿಗೆ ಅರ್ಪಣೆ

ದಿ ಕಾಶ್ಮೀರ್ ಫೈಲ್ಸ್‌ನ ಯಶಸ್ಸಿನ ನಂತರ, ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಮುಂದಿನ ಚಿತ್ರ ‘ದಿ ವ್ಯಾಕ್ಸಿನ್ ವಾರ್’ ಸೆ. 28 ರಂದು ದೇಶಾದ್ಯಂತ ತೆರೆ ಕಾಣಲಿದೆ. ವ್ಯಾಕ್ಸಿನ್ ವಾರ್ ಚಿತ್ರವು ಭಾರತೀಯ ಜೈವಿಕ ವಿಜ್ಞಾನಿಗಳ ಬಗ್ಗೆ ನೈಜ ಕಥಾನಕವನ್ನು ಹೊಂದಿದೆ . ಕೋವಿಡ್ -19 ಸಾಂಕ್ರಾಮಿಕದ ಅನಿಶ್ಚಿತತೆಯ ಸಮಯದಲ್ಲಿ ಅತ್ಯಂತ ಕಡಿಮೆ ಸಮಯದಲ್ಲಿ ವ್ಯಾಕ್ಸೀನ್ ಅನ್ನು ತಯಾರಿಸಿದ ಭಾರತೀಯ ವಿಜ್ಞಾನಿಗಳು ಮತ್ತು ವೈದ್ಯರಿಗೆ ಈ ಚಿತ್ರವು ಸಮರ್ಪಿಸಲ್ಪಟ್ಟಿದೆ. ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಾಜಿ(NiV) ಹಾಗೂ ICMR […]

ನಿಪಾ ವೈರಸ್ ಪ್ರಕರಣ: ಕೋಝಿಕ್ಕೋಡ್ ನಲ್ಲಿ ಮೊಬೈಲ್ ಲ್ಯಾಬ್ ಸ್ಥಾಪನೆ; ಗಡಿ ಭಾಗದಲ್ಲಿಅಲರ್ಟ್ ಘೋಷಣೆ

ಕೋಝಿಕ್ಕೋಡ್: ಕೇರಳದಲ್ಲಿ ನಿಪಾ ವೈರಸ್ ಪ್ರಕರಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಗುರುವಾರ ರಾಜ್ಯಾದ್ಯಂತ ತನ್ನ ಅಧಿಕಾರಿಗಳಿಗೆ ನಿಪಾ ವೈರಸ್ (NiV) ಕುರಿತು ಸಲಹೆಯನ್ನು ನೀಡಿದೆ. ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಐದು ಪಾಸಿಟಿವ್ ಪ್ರಕರಣಗಳು ಮತ್ತು ಎರಡು ಸಾವು ವರದಿಯಾಗಿದೆ. ಇದರೊಂದಿಗೆ ಕರ್ನಾಟಕ ಕೇರಳ ಗಡಿ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ದೇಶಾದ್ಯಂತ ವೈರಸ್ ಬಗ್ಗೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಕೋಝಿಕ್ಕೋಡ್ ನಲ್ಲಿ ಮೊಬೈಲ್ ಲ್ಯಾಬ್ ಸೌಲಭ್ಯ ಸ್ಥಾಪಿಸಲಾಗಿದೆ. ಇದರಿಂದ ಪುಣೆಯ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸದೆಯೇ […]