ಎನ್.ಎಮ್.ಎಮ್.ಎಸ್ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನ ಫೆಬ್ರವರಿಯಲ್ಲಿ ನಡೆದ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಿಲ್ಲೆಯ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ ಪಡೆಯಲು ವೆಬ್‌ಸೈಟ್ www.scholarships.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2018 ರಿಂದ 2021 ನೇ ಸಾಲಿನವರೆಗೆ ಎನ್.ಎಮ್.ಎಮ್.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಹೆಸರು ನೋಂದಾಯಿಸಿಕೊಂಡ ಸರ್ಕಾರಿ ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು ನವೀಕರಣ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ನೋಡೆಲ್ ಅಧಿಕಾರಿ ಅಥವಾ ಜಿಲ್ಲಾ ನೋಡೆಲ್ ಅಧಿಕಾರಿಯಾದ ಚಂದ್ರನಾಯ್ಕ್, ಉಪನ್ಯಾಸಕರು, ಡಯಟ್, ಉಡುಪಿ […]