ನವಮಂಗಳೂರು ಬಂದರಿನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ

ಮಂಗಳೂರು: ನವ ಮಂಗಳೂರು ಬಂದರು ಟ್ರಸ್ಟ್(New Mangalore Port Trust )​ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಜನವರಿ 15, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಫ್​ಲೈನ್ ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ. ಅಭ್ಯರ್ಥಿಗಳು ತಡಮಾಡದೇ ಈ ಕೂಡಲೇ ಅರ್ಜಿ ಹಾಕಿ. ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ಇಲ್ಲಿದೆ. ಪ್ರಮುಖ […]

ಮಂಗಳೂರಿಗೆ ಮೂರನೇ ಐಷಾರಾಮಿ ಹಡಗು ಎಂಎಸ್ ನೌಟಿಕಾ ಆಗಮನ

ಮಂಗಳೂರು: ನವಮಂಗಳೂರು ಬಂದರಿಗೆ ಪ್ರಸಕ್ತ ಸಾಲಿನ ಮೂರನೇ ಐಷಾರಾಮಿ ಹಡಗು ಆಗಮಿಸಿದೆ. ಎಂಎಸ್ ನೌಟಿಕಾ ಎನ್ನುವ ಈ ಹಡಗಿನಲ್ಲಿ ಸುಮಾರು 548 ಪ್ರಯಾಣಿಕರು ಹಾಗೂ 397 ಸಿಬ್ಬಂದಿಗಳು ಪ್ರವಾಸ ಮಾಡುತ್ತಿದ್ದು, ಹಡಗು 30,277 ಟನ್‌ಗಳನ್ನು ಸಾಗಿಸುವ ಸಾಮರ್ಥ್ಯವನ್ನು ಹೊಂದಿದೆ. ಮಾಲ್ಡೀವ್‌ ದ್ವೀಪಕ್ಕೆ ಪ್ರಯಾಣ ಬೆಳೆಸಿರುವ ಈ ಹಡಗು ಮಸ್ಕತ್‌ನಿಂದ ಭಾರತಕ್ಕೆ ಬಂದಿದ್ದು, ಮುಂಬೈ, ಮೊರ್ಮಗಾಂವ್ ಮೂಲಕ ಮಂಗಳೂರು ಬಂದರು ಪ್ರವೇಶಿಸಿದೆ. ನವ ಮಂಗಳೂರು ಬಂದರಿಗೆ ಗುರುವಾರ ಬೆಳಿಗ್ಗೆ 6 ಗಂಟೆಗೆ ತಲುಪಿದ್ದು, ಅದರಲ್ಲಿದ್ದ ಪ್ರಯಾಣಿಕರು ಕುದ್ರೋಳಿ ಗೋಕರ್ಣನಾಥ […]

ಮಂಗಳೂರು: ಕರ್ತವ್ಯ ನಿರತ ಮಹಿಳಾ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ

ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್ ನಲ್ಲಿ ಬುಧವಾರದಂದು ಕರ್ತವ್ಯದಲ್ಲಿದ್ದ ಮಹಿಳಾ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ನಡೆದಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜ್ಯೋತಿ ಭಾಯಿ ಸಿಂಗ್ ಪರ್ಮಾರ್ (33) ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲೇ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಜ್ಯೋತಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಈಕೆಯ ಗಂಡ ಓಂಬೀರ್ […]