ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ: ಜನಾಕ್ರೋಶದ ಬೆನ್ನಲ್ಲೇ ಯೂಟರ್ನ್ ಹೊಡೆದ ಸಚಿವ ಕತ್ತಿ

ಬೆಂಗಳೂರು: ಮನೆಯಲ್ಲಿ ಟಿವಿ, ಬೈಕ್, ಫ್ರಿಡ್ಜ್ ಇದ್ದರೆ ಅವರ ಬಿಪಿಎಲ್ ಕಾರ್ಜ್ ಅನ್ನು ರದ್ದುಗೊಳಿಸಲಾಗುವುದು ಎಂದು ಹೇಳಿದ್ದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು, ಸಾರ್ವಜನಿಕರಿಂದ ಹಾಗೂ ಸ್ವಪಕ್ಷದ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ.