ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ: ಡಿಸಿಎಂ ಅಶ್ವಥ್ ನಾರಾಯಣ್ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಪ್ರಕರಣ ಹಾಗೂ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಲಾಕ್ ಡೌನ್ ಹೇರುವ ಸಾಧ್ಯತೆ ಇದೆ ಎಂಬ ವದಂತಿ ಹಬ್ಬಿತ್ತು. ಇದಕ್ಕೆ ಇಂದು ಸ್ಪಷ್ಟನೆ ನೀಡಿದ ಅಶ್ವಥ್ ನಾರಾಯಣ, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಹೇರಳಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಶನಿವಾರ ಹಾಗೂ ಭಾನುವಾರ ಕೂಡ ಲಾಕ್ ಡೌನ್ ಮಾಡಲ್ಲ ಎಂದು ಹೇಳಿದರು.