ಮದುವೆ, ಸಭೆ, ಸಮಾರಂಭಗಳಲ್ಲಿ ನೂರಕ್ಕಿಂತ ಅಧಿಕ ಜನ ಸೇರುವಂತಿಲ್ಲ: ಸಚಿವ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೇಗವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮದುವೆ, ಸಭೆ ಹಾಗೂ ಸಮಾರಂಭಗಳಿಗೆ ಸರ್ಕಾರ ನಿಯಂತ್ರಣ ಹೇರಲು ಮುಂದಾಗಿದೆ. ರಾಜ್ಯದಲ್ಲಿ ಸೋಂಕು ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತಾಗಿ ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ತುರ್ತು ಸಭೆ ನಡೆಯಿತು. ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ಡಾ. ಸುಧಾಕರ್, ಒಳಾಂಗಣ ನಡೆಯುವ ಮದುವೆ, ಸಭೆ, ಸಮಾರಂಭಗಳಲ್ಲಿ ನೂರಕ್ಕಿಂತ ಅಧಿಕ ಜನ ಸೇರುವಂತಿಲ್ಲ. ಅದೇ ರೀತಿ ಹೊರಗಡೆ ನಡೆಯುವ ಕಾರ್ಯಕ್ರಮಗಳಲ್ಲಿ 200 ಜನಕ್ಕೆ ಸೀಮಿತಗೊಳಿಸಲಾಗಿದೆ ಎಂದು ತಿಳಿಸಿದರು. […]