ವಿದ್ಯುತ್ ಕ್ಷೇತ್ರದ ಖಾಸಗೀಕರಣ ಇಲ್ಲ: ಸಚಿವ ಸುನಿಲ್ ಕುಮಾರ್
ಬೆಂಗಳೂರು: ವಿದ್ಯುತ್ ನಿಗಮಗಳನ್ನು ಖಾಸಗೀಕರಣ ಮಾಡುವುದಿಲ್ಲ. ಈ ಕುರಿತ ಯಾವುದೇ ಪ್ರಸ್ತಾವ ರಾಜ್ಯ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದರು. ವಿಧಾನಸಭೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದರು. ವಿದ್ಯುತ್ ಪಂಪ್‌ಸೆಟ್‌ಗಳಿಗೆ ಹಾಗೂ ಗ್ರಾಮೀಣ ಪ್ರದೇಶದ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಹಾಗೂ ಪ್ರಿಪೇಯ್ಡ್ ಮೀಟರ್ ಅಳವಡಿ ಸುವ ಪ್ರಸ್ತಾವವೂ ಇಲ್ಲ ಎಂದರು.