ವಿಟ್ಲಪಿಂಡಿ ಉತ್ಸವದ ಹಿನ್ನೆಲೆ: ಸೆ. 11ರಂದು ಮಧ್ಯಾಹ್ನ 12.30ರಿಂದ ಸಂಜೆ 5.30ರ ವರೆಗೆ ರಥಬೀದಿಗೆ ಸಾರ್ವಜನಿಕರ ಪ್ರವೇಶ ನಿಷೇಧ
ಉಡುಪಿ: ಇಲ್ಲಿನ ಶ್ರೀ ಕೃಷ್ಣಮಠದ ರಥಬೀದಿಯಲ್ಲಿ ಸೆಪ್ಟೆಂಬರ್ 11ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಶ್ರೀಕೃಷ್ಣ ಲೀಲೋತ್ಸವ (ವಿಟ್ಲ ಪಿಂಡಿ) ನೆರವೇರಲಿದೆ. ಆದರೆ ಕೋವಿಡ್ 19 ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 12.30ರಿಂದ ಸಂಜೆ 5.30 ರ ವರೆಗೆ ರಥಬೀದಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಡಳಿತ ಆದೇಶಿಸಿದೆ. ಹಾಗಾಗಿ ಸಾರ್ವಜನಿಕರು ಸಂಜೆ 6 ಗಂಟೆಯ ಬಳಿಕ ಕನಕನ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆಯಬಹುದು ಎಂದು ಮಠದ ಪ್ರಕಟಣೆ ತಿಳಿಸಿದೆ.