ರಾಜ್ಯದ ಯಾವುದೇ ಜಿಲ್ಲೆಗಳಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ; ಕೃಷಿ ಸಚಿವ

ಬೆಂಗಳೂರು: ಈ ವರ್ಷ ಮುಂಗಾರು ನಿಗದಿತ ಅವಧಿಗಿಂತ ಮುಂಚಿತವಾಗಿ ಆರಂಭವಾದ ಕಾರಣ ಮತ್ತು ಮುಸಕಿನ ಜೋಳ ಪ್ರದೇಶ 2 ಲಕ್ಷ ಹೆಕ್ಟೇರ್‌ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಹೆಚ್ಚಿದೆ. ಕೆಲ ರೈತರು ಆತಂಕದಿಂದ ಆಗಸ್ಟ್‌-ಸೆಪ್ಟೆಂಬರ್‌ಗೆ ಅಗತ್ಯವಿರುವ ಗೊಬ್ಬರವನ್ನು ಈಗಲೇ ಖರೀದಿಸಲು ಮುಂದಾಗಿದ್ದು, ಸಹ ತಕ್ಷಣ ಬೇಡಿಕೆ ಹೆಚ್ಚಲು ಕಾರಣವಾಗಿರಬಹುದು ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ರೈತರಿಗೆ ಆತಂಕ ಬೇಡ:ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ ಯಾವುದೇ ಜಿಲ್ಲೆಗಳಲ್ಲೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ. ಆದರೂ, […]