ನರೇಂದ್ರ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ರಾಹುಲ್ ಗಾಂಧಿ ಚಾಲನೆ?
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅನುಪಸ್ಥಿತಿಯಲ್ಲಿ ಇಂದು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ಮಂಡನೆಯಾಗಲಿದೆ. ಸಂಸತ್ತಿನಲ್ಲಿ ಮರುಸೇರ್ಪಡೆಯಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಚರ್ಚೆಯನ್ನು ಪ್ರಾರಂಭಿಸುತ್ತಾರೆ ಎಂದು ಮೂಲಗಳು ತಿಳಿಸಿವೆ. ಅವಿಶ್ವಾಸ ನಿರ್ಣಯಕ್ಕೆ ಮುನ್ನ ಮಂಗಳವಾರ ಬಿಜೆಪಿ ತನ್ನ ಸಂಸದೀಯ ಪಕ್ಷದ ಸಭೆಯನ್ನು ಕರೆದಿದ್ದು, ಬುಧವಾರ ಮತ್ತು ಗುರುವಾರ ಚರ್ಚೆ, ಉತ್ತರ ಮತ್ತು ಮತದಾನ ನಡೆಯಲಿದೆ. ಅವಿಶ್ವಾಸ ನಿರ್ಣಯವು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಕುರಿತು ಮಾತನಾಡಲು […]