ಮೂರುವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ!

ನೊಯ್ಡಾ: ಮೂರುವರೆ ವರ್ಷದ ಹೆಣ್ಣು ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಈಜು ಶಿಕ್ಷಕನಿಗೆ ಇಲ್ಲಿನ ಗೌತಮ ಬುದ್ಧ ನಗರ ಜಿಲ್ಲೆಯ ಪೋಕ್ಸೊ ಪ್ರಕರಣಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ರೂ.24,000 ದಂಡವನ್ನೂ ವಿಧಿಸಿದೆ. ಉತ್ತರ ಪ್ರದೇಶದ ನೊಯಿಡಾದಲ್ಲಿರುವ ಖಾಸಗಿ ಶಾಲೆಯೊಂದರಲ್ಲಿ ಮಕ್ಕಳಿಗೆ ಈಜು ಕಲಿಸುತ್ತಿದ್ದ ಚಂಡಿದಾಸ ಎಂಬಾತ 2018ರಲ್ಲಿ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ವಿಶೇಷ ನ್ಯಾಯಾಲಯವು ಮಂಗಳವಾರ ಅಂತಿಮ ಆದೇಶ ನೀಡಿದ್ದು, ಈಜು ಶಿಕ್ಷಕ ಅಪರಾಧಿ […]