ಕರ್ನಾಟಕದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ನಿರ್ಮಲಾ ಸೀತಾರಾಮನ್

ಬೆಂಗಳೂರು: ಮಂಗಳವಾರದಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿರ್ಮಲಾ ಸೀತಾರಾಮನ್ ರವರಿಗೆ ಶುಭ ಹಾರೈಸಿದರು. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.