ಈಗ ನಿಮಗೆ ಅವಕಾಶ ಬಂದಿದೆ, ದಲಿತರನ್ನು‌ ಸಿಎಂ ಮಾಡಿ: ಕಟೀಲ್ ಗೆ ಸಿದ್ದರಾಮಯ್ಯ ಸವಾಲು

ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಭಾರೀ ಚರ್ಚೆ ಆಗುತ್ತಿರುವ ಸಂದರ್ಭದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ಪಕ್ಷದಲ್ಲಿ ನಾಲ್ಕು ಜನ ಮುಖ್ಯಮಂತ್ರಿಯಾಗಿದ್ದಾರೆ. ಈಗ ಬಿಜೆಪಿಯವರಿಗೆ ಅವಕಾಶ ಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​​ ಈಗ ಕರ್ನಾಟಕದಲ್ಲಿ ದಲಿತರನ್ನು ಮುಖ್ಯಮಂತ್ರಿ ಮಾಡಲಿ ಎಂದು ಸವಾಲು ಎಸೆದಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನಗಳ ಹಿತದ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಕಾಳಜಿಯಿಲ್ಲ. ಕಳೆದ‌ ಎರಡು ವರ್ಷಗಳಿಂದಲೂ ಆ ಕಾಳಜಿ ಇರಲಿಲ್ಲ. ಈ ಹಿಂದೆ ಬಂದ ಪ್ರವಾಹದ […]