ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ: ಎನ್‌ಪಿಎಸ್‌ ನಿಂದ ಹೊರಬಂದು ಒಪಿಎಸ್‌ಗೆ ಒಳಪಡಲು ಅವಕಾಶ; ಜೂನ್ 30ರೊಳಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದ್ದು, 2006ರ ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆ ಮೂಲಕ ಆಯ್ಕೆಯಾದ ನೌಕರರು, ರಾಷ್ಟ್ರೀಯ ಪಿಂಚಣಿ ಯೋಜನೆ (NPS) ವ್ಯಾಪ್ತಿಯಿಂದ ಹೊರಬಂದು ಹಳೆಯ ಪಿಂಚಣಿ ಯೋಜನೆಗೆ (OPS) ಬದಲಾಗಲು ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು ರಾಜ್ಯ ಸರ್ಕಾರ ವಿಧಿಸಿದೆ. ಹಳೆಯ ಪಿಂಚಣಿ ಸೇವೆಗೆ ಒಳಪಡಲು ಸರ್ಕಾರಿ ನೌಕರರು ತಾವೇ ಒಪ್ಪಿಗೆ ಸೂಚಿಸಬೇಕು. […]