ಆಧಾರ್ ಗೆ ಲಿಂಕ್ ಮಾಡದ ಪ್ಯಾನ್ ಖಾತೆಗಳು ಹೆಚ್ಚಿನ ಟಿಡಿಎಸ್-ಟಿಸಿಎಸ್ ಗೆ ಕಾರಣವಾಗಬಹುದು: ಆದಾಯ ತೆರಿಗೆ ಇಲಾಖೆ
ನವದೆಹಲಿ: ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದ ಕಾರಣ ಕಾರ್ಯನಿರತವಲ್ಲದ(inoperative) ಶಾಶ್ವತ ಖಾತೆ ಸಂಖ್ಯೆ (ಪ್ಯಾನ್) ನಿಷ್ಕ್ರಿಯ ಪ್ಯಾನ್(inactive)ಗೆ ಸಮಾನವಾಗಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟಪಡಿಸಿದೆ. ಕಾರ್ಯಾಚರಣೆಯಲ್ಲಿ ಇಲ್ಲದ ಪ್ಯಾನ್ ನಿಷ್ಕ್ರಿಯ ಪ್ಯಾನ್ ಅಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಪ್ಯಾನ್- ಆಧಾರ್ ಲಿಂಕ್ ಆಗಿರುವುದನ್ನು ಲೆಕ್ಕಿಸದೆ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಅನ್ನು ಸಲ್ಲಿಸಬಹುದು ಎಂದು ತೆರಿಗೆ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ. ಆದಾಗ್ಯೂ, ಬಾಕಿ ಉಳಿದಿರುವ ಮರುಪಾವತಿಗಳು ಮತ್ತು ಅಂತಹ ಮರುಪಾವತಿಗಳ ಮೇಲಿನ ಬಡ್ಡಿಯನ್ನು ಇಂತಹ ಪ್ಯಾನ್ ಗಳಿಗೆ […]
ಅನಿವಾಸಿ ಭಾರತೀಯ ಮತದಾರರನ್ನು ಸೆಳೆಯಲು ಸ್ವೀಪ್ ನಿಂದ ವಿನೂತನ ಪ್ರಯತ್ನ
ವಿಧಾನಸಭಾ ಸಾರ್ವತ್ರಿಕ ಚುನಾವಣೆ ಪ್ರಯುಕ್ತ ಜಿಲ್ಲೆಯಲ್ಲಿ ಮತದಾರರಿಗೆ ಜಾಗೃತಿ ಮತ್ತು ಮತದಾನದ ಮಹತ್ವ ಕುರಿತು ಅರಿವು ಮೂಡಿಸುತ್ತಿರುವ ಜಿಲ್ಲಾ ಸ್ವೀಪ್ ಸಮಿತಿಯು, ಕಳೆದ ಬಾರಿಗಿಂತ ಹೆಚ್ಚಿನ ಮತದಾನ ನಡೆಸಲು ಅನೇಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ವಿದೇಶದಲ್ಲಿ ಮತ್ತು ಹೊರರಾಜ್ಯದಲ್ಲಿ ನೆಲೆಸಿರುವ ಜಿಲ್ಲೆಯ ಮತದಾರರನ್ನು ಮತಗಟ್ಟೆಗೆ ಬರುವಂತೆ ಮಾಡಲು ವಿನೂತನ ಪ್ರಯತ್ನ ಮಾಡುತ್ತಿದೆ. ಜಿಲ್ಲೆಯ ಸಾವಿರಾರು ಮಂದಿ ಉದ್ಯೋಗ, ವಿದ್ಯಾಭ್ಯಾಸ ಮತ್ತಿತರ ಕಾರಣಗಳಿಂದ ವಿದೇಶಗಳಿಗೆ ಮತ್ತು ಹೊರರಾಜ್ಯಗಳಿಗೆ ತೆರಳಿದ್ದು, ಇಲ್ಲಿಯೇ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ. […]