ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗುವ ಸಂಘಟನೆಗಳ ಮೇಲೆ ನಿಷೇಧ: ಎನ್ಎಸ್ಎ ಅಜಿತ್ ದೋವಲ್ ಉಪಸ್ಥಿತಿಯ ಅಂತರ್ಧರ್ಮೀಯ ಸಂವಾದದಲ್ಲಿ ನಿರ್ಣಯ
ನವದೆಹಲಿ: ಅಖಿಲ ಭಾರತ ಸೂಫಿ ಸಜ್ಜದನಾಶಿನ್ ಕೌನ್ಸಿಲ್ (ಎಐಎಸ್‌ಎಸ್‌ಸಿ) ಶನಿವಾರ ಆಯೋಜಿಸಿದ್ದ ಸರ್ವಧರ್ಮ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, “ಕೆಲವು ಅಂಶಗಳು” ಧರ್ಮ ಮತ್ತು ಸಿದ್ಧಾಂತದ ಹೆಸರಿನಲ್ಲಿ ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿವೆ. ಇದು ಇಡೀ ರಾಷ್ಟ್ರದ ಮೇಲೆ ಪರಿಣಾಮ ಬೀರುತ್ತಿದ್ದು, ಇದನ್ನು ಎದುರಿಸಲು ಧಾರ್ಮಿಕ ಮುಖಂಡರು ಒಟ್ಟಾಗಿ ಕೆಲಸ ಮಾಡಬೇಕಿದೆ ಎಂದರು. ಕೆಲವರು ಧರ್ಮದ ಹೆಸರಿನಲ್ಲಿ ಹಗೆತನ ಸೃಷ್ಟಿಸಿ ಇಡೀ ದೇಶದ ಮೇಲೆ ದುಷ್ಪರಿಣಾಮ ಬೀರುತ್ತಾರೆ. ಇದಕ್ಕೆ ನಾವು ಮೂಕಪ್ರೇಕ್ಷಕರಾಗಲು ಸಾಧ್ಯವಿಲ್ಲ. […]