ಕಾರ್ಕಳ: ಜ್ಞಾನಸುಧಾ ಕಾಲೇಜಿನಲ್ಲಿ ಎನ್.ಎಸ್.ಎಸ್. ವಾರ್ಷಿಕ ಶಿಬಿರ ಉದ್ಘಾಟನೆ

ಗಣಿತನಗರ :ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸಮಯಪ್ರಜ್ಞೆ, ಶಿಸ್ತು, ನಾಯಕತ್ವವನ್ನು ಕಲಿಸುವುದರ ಜೊತೆಗೆ ಸಹನೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅನಿಲ್ ಕುಮಾರ್‌ಜೈನ್‌ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ಕುಕ್ಕುಂದೂರಿನ ಶ್ರೀ ದುರ್ಗಾದೇವಿ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾ.ಸೇ.ಯೋ. ಘಟಕದಿಂದ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರ -2022ರ ದಿಕ್ಸೂಚಿ ಭಾಷಣವನ್ನುದ್ದೇಶಿಸಿ ಮಾತನಾಡಿ, ಎನ್.ಎಸ್.ಎಸ್ ಜೊತೆಗಿನ ತಮ್ಮ ಸ್ವಂತ ಅನುಭವಗಳನ್ನು ಹಂಚಿಕೊಂಡು, ಎನ್.ಎಸ್.ಎಸ್ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯ ಹಿಂದಿನ ಶಕ್ತಿಯಾಗಿ ಪಾತ್ರವಹಿಸುತ್ತದೆ ಎಂದರು. ಶಿಬಿರವನ್ನು […]