ಭಂಡಾರ್ಕಾರ್ಸ್ ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಕೆರೆಯ ಹೂಳೆತ್ತುವ ಕಾರ್ಯಕ್ರಮ

ಕುಂದಾಪುರ: ಮೇ. 19 ರಂದು ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಏನ್. ಎಸ್. ಎಸ್ ವಿದ್ಯಾರ್ಥಿಗಳಿಂದ ನೆಂಪು, ನೇರಳಕಟ್ಟೆಯ ಪುರಾತನ ದೇವಾಲಯವಾದ ಶ್ರೀ ಗಣಪತಿ ದೇವಸ್ಥಾನದ ಕೆರೆಯ ಹೂಳೆತ್ತುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ದೇವಸ್ಥಾನದ ಧರ್ಮದರ್ಶಿ ರಾಮಕೃಷ್ಣ ಭಟ್ ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಅರುಣ್ ಎ ಎಸ್, ರಾಮಚಂದ್ರ ಆಚಾರ್, ಅಣ್ಣಪ್ಪ ಪೂಜಾರಿ ಹಾಗೂ ಉಪನ್ಯಾಸಕ ಗಿರಿರಾಜ್ ಭಟ್ ಉಪಸ್ಥಿತರಿದ್ದರು. 90 ವಿದ್ಯಾರ್ಥಿಗಳು ಒಂದು ದಿನದ ಈ ಶಿಬಿರದಲ್ಲಿ ಭಾಗವಹಿಸಿ […]

ಮತದಾನ ನಮ್ಮ ಹಕ್ಕು; ಪ್ರತಿಯೊಬ್ಬರೂ ಮತ ಚಲಾಯಿಸಿ: ಅನಿತಾ ಎಂ.‌ಮಡ್ಲೂರ್

ಮಣಿಪಾಲ: ಪಾತ್ರೆ ಅಥವಾ ಮಾಪಕ ತುಂಬಲು ಹೇಗೆ ಒಂದೊಂದು ಹನಿ ನೀರೂ ಮುಖ್ಯವೋ ಹಾಗೆಯೆ ಮತದಾನದಲ್ಲಿ ಒಂದೊಂದು ಮತವೂ ಮುಖ್ಯವಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಅದು ನಮ್ಮ ಹಕ್ಕು. ನಮ್ಮ ಮತ ನಮ್ಮ ಅಧಿಕಾರ ಎಂದು ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಅನಿತಾ ಎಂ.‌ಮಡ್ಲೂರ್ ಹೇಳಿದರು. ಅವರು ಮಣಿಪಾಲದ ಮಣ್ಣಪಳ್ಳ ಕೆರೆಯ ಬಳಿ ವಿಶ್ವ ಭೂ ದಿನ ಪ್ರಯುಕ್ತ ಪ್ರಕೃತಿ ಸೌಂದರ್ಯದ ವಾತಾವರಣದಲ್ಲಿ ರವಿವಾರ ಎಂಐಟಿ ಮಣಿಪಾಲದ ರಾಷ್ಟ್ರೀಯ ಸೇವಾ ಯೋಜನೆಯ ಎರಡು ಘಟಕಗಳು, […]

ವಿದ್ಯಾರ್ಥಿಗಳಿಗಾಗಿ ನಶಾ ಮುಕ್ತ ಭಾರತ ಅಭಿಯಾನ ಮತ್ತು ಕಾನೂನು ಜಾಗೃತಿ ಕಾರ್ಯಾಗಾರ

ಉಡುಪಿ: ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ, ಜಿಲ್ಲಾ ಲೀಡ್ ಕಾಲೇಜು, ಉಡುಪಿ ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ, ಪೋಲೀಸ್ ಇಲಾಖೆ, ಜಿಲ್ಲಾ ಅಂಗವಿಕಲ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಉಡುಪಿ ಇವರ ಜಂಟಿ ಸಹಯೋಗದಿಂದ ನಶಾ ಮುಕ್ತ ಭಾರತ ಅಭಿಯಾನ ಮತ್ತು ಎನ್.ಎಸ್.ಎಸ್. ಸ್ವಯಂಸೇವಕರಿಗೆ ಕಾನೂನು ಜಾಗೃತಿ ಕಾರ್ಯಗಾರ ಕಾಲೇಜಿನ ಯು.ಜಿ. ಸಭಾಂಗಣದಲ್ಲಿ ಬುಧವಾರದಂದು ಜರುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನ […]

ನಾವುಂದ: ಫಿಟ್ ಇಂಡಿಯಾ ಫ್ರೀಡಂ ರನ್ ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮ

ನಾವುಂದ: ಅಕ್ಟೋಬರ್ 30ರಂದು ಭಂಡಾರ್ಕಾರ್ಸ್ ಕಾಲೇಜಿನ ಎನ್ ಎಸ್ ಎಸ್ ಘಟಕ, ಮಂಗಳೂರಿನ ಎನೆಪೋಯ ದಂತ ವಿಜ್ಞಾನ ಕಾಲೇಜಿನ ಎನ್ ಎಸ್ ಎಸ್ ಘಟಕ, ನಾವುಂದ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ನಾವುಂದ ಇವರ ಸಹಯೋಗದಲ್ಲಿ ಫಿಟ್ ಇಂಡಿಯಾ ಫ್ರೀಡಂ ರನ್ 3.0 ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮವು ನಾವುಂದ ಗ್ರಾಮ ಪಂಚಾಯತ್ ಪರಿಸರದಲ್ಲಿ ನಡೆಯಿತು. ಸುಮಾರು 200ಕ್ಕೂ ಮಿಕ್ಕಿ ಎನ್ ಎಸ್ ಎಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೀಚ್ ಪರಿಸರವನ್ನು ಸ್ವಚ್ಚಗೊಳಿಸಿದರು. ಈ […]

ತ್ರಿಶಾ ಕಾಲೇಜಿನಲ್ಲಿ ಎನ್.ಎಸ್.ಎಸ್. ಹಾಗೂ ವೈ.ಆರ್. ಸಿ. ಸ್ವಯಂಸೇವಕರಿಗೆ ಮಾಹಿತಿ ಕಾರ್ಯಗಾರ

ಮಂಗಳೂರು: ನಗರದ ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್ಮೆಂಟ್ ಹಾಗೂ ತ್ರಿಶಾ ಸಂಧ್ಯಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‍ಎಸ್‍ಎಸ್) ಮತ್ತು ಯೂತ್ ರೆಡ್ ಕ್ರಾಸ್ (ವೈ.ಆರ್.ಸಿ.) ಘಟಕಗಳಿಗೆ ಹೊಸದಾಗಿ ಸೇರ್ಪಡೆಗೊಂಡ ಸ್ವಯಂ ಸೇವಕರಿಗೆ ಒಂದು ದಿನದ ಮಾಹಿತಿ ಕಾರ್ಯಗಾರವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಹ್ಯಾದ್ರಿ ಕಾಲೇಜು ಮಂಗಳೂರಿನ ಕಾರ್ಯತಂತ್ರ ಯೋಜನಾ ವಿಭಾಗದ ಮುಖ್ಯಸ್ಥ ರಮೇಶ್ ಕೆ.ಜಿ., ವ್ಯಕ್ತಿಯೊಬ್ಬನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಎನ್.ಎಸ್.ಎಸ್ ಮತ್ತು ವೈ.ಆರ್.ಸಿ. ಗಳ ಪಾತ್ರ ಬಹಳ ಮಹತ್ವದ್ದಾಗಿದೆ. […]