ಜ್ಞಾನಸುಧಾ ಕಾಲೇಜು: ಎನ್.ಎಸ್.ಎಸ್. ಕಾರ್ಯಚಟುವಟಿಕೆಗಳ ಉದ್ಘಾಟನೆ

ಕಾರ್ಕಳ: ವಿದ್ಯಾರ್ಥಿಗಳು ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳುವ ಅರಿವು ಮೂಡಲು ಎನ್ನೆಸ್ಸೆಸ್ ತನ್ನದೇ ಆದ ರೀತಿಯಲ್ಲಿ ಸಹಕಾರಿಯಾಗಿದೆ ಎಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿಯ ಪ್ರಾಂಶುಪಾಲರಾದ ಡಾ. ಪ್ರಸಾದ್ ರಾವ್ ಹೇಳಿದರು. ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟಕರಾಗಿ ಭಾಗವಹಿಸಿ ಮಾತನಾಡುತ್ತಾ ನಾನು ನನ್ನದು ಎಂಬ ಸ್ವಾರ್ಥಪರತೆಯ ಮನೋಭಾವ ಎಲ್ಲೆಡೆ ಮನೆಮಾಡಿರುವಾಗ ಶೈಕ್ಷಣಿಕ ಜೀವನದ ಎನ್ನೆಸ್ಸೆಸ್ ಸಹಬಾಳ್ವೆ, ‘ನನಗಲ್ಲ ನಿನಗೆ’ ಎಂಬ ಕಲ್ಪನೆ ಕೊಟ್ಟು ಶ್ರಮದ […]

76 ಬಡಗಬೆಟ್ಟು ಮೂಡುಮನೆ ಕುಟುಂಬದ 300 ವರ್ಷಗಳಿಗೂ ಪುರಾತನ ವಸ್ತುಗಳ ಹಸ್ತಾಂತರ

ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜು,ರಾಷ್ಟ್ರೀಯ ಸೇವಾ ಯೋಜನಾ ಘಟಕ ಇವರ ಸಹಯೋಗದಲ್ಲಿ, ಶನಿವಾರದಂದು ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯಗಳ ದಿನ ಮತ್ತು ವಿಶ್ವ ಪರಿಸರ ದಿನಾಚರಣೆಯನ್ನು ಶಿರ್ವದ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಚೀನ ವಸ್ತುಗಳನ್ನು ಹಸ್ತಾಂತರ ಮಾಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ 76 ಬಡಗಬೆಟ್ಟು ಮೂಡುಮನೆ ಕುಟುಂಬದ ಸುಮಾರು 300 ವರ್ಷಗಳಿಗೂ ಪುರಾತನವಾದ ಹಲವು ಪ್ರಾಚೀನ ವಸ್ತುಗಳನ್ನು ಕಾಲೇಜಿನ ವಸ್ತು ಸಂಗ್ರಹಾಲಯಕ್ಕೆ […]

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ ಆಯೋಜನೆ

ನಿಟ್ಟೆ: ಇಂದು ನಾವು ತಂತ್ರಜ್ಞಾನದ ವಿಚಾರವಾಗಿ ಎಷ್ಟೇ ಮುಂದುವರಿದಿದ್ದರೂ ಪ್ರತಿಯೋರ್ವ ಜೀವಿಗೆ ಅಗತ್ಯವಿರುವ ರಕ್ತದಂತಹ ವಸ್ತುವನ್ನು ಕೃತಕವಾಗಿ ಉತ್ಪಾದಿಸಲು ಆಗುವುದಿಲ್ಲ. ಇಂತಹ ಸಂದರ್ಭದಲ್ಲಿ ನಾವೆಲ್ಲರೂ ರಕ್ತದ ಮಹತ್ವ ಹಾಗೂ ಜೀವ ಉಳಿಸುವ ನಿಟ್ಟಿನಲ್ಲಿ ರಕ್ತದಾನದ ಅಗತ್ಯತೆಯನ್ನು ತಿಳಿದುಕೊಳ್ಳಬೇಕು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ಕಾರ್ಕಳ ಘಟಕದ ಅಧ್ಯಕ್ಷ ಡಾ. ಕೆ.ಆರ್ ಜೋಷಿ ಹೇಳಿದರು. ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ರೆಡ್‌ಕ್ರಾಸ್ ಸೊಸೈಟಿ, 6 (ಕೆ.ಎ.ಆರ್) ನೇವಿ ಎನ್.ಸಿ.ಸಿ ಸಬ್‌ಯುನಿಟ್ ನಿಟ್ಟೆ, ಮೆಕ್ಯಾನಿಕಲ್ […]

ಮುನಿಯಾಲು ಆಯುರ್ವೇದ ಕಾಲೇಜಿನ ಎನ್. ಎಸ್. ಎಸ್. ಘಟಕದಿಂದ ಕಾರ್ಯಕ್ರಮ

ಮುನಿಯಾಲು: ಗುರುವಾರದಂದು ಮಣಿಪಾಲದ ಮುನಿಯಾಲು ಆಯುರ್ವೇದ ಕಾಲೇಜಿನ ಎನ್. ಎಸ್. ಎಸ್. ಘಟಕ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಂಗಳೂರು, ಯುನಿಸೆಫ್ ಸಹಭಾಗಿತ್ವದಲ್ಲಿ ‘ಆರೋಗ್ಯ ಮತ್ತು ಪೌಷ್ಟಿಕ ಸೇವೆಗಳನ್ನು ಪಡೆಯಲು ಸಮುದಾಯಗಳಲ್ಲಿ ಸಾಮಾಜಿಕ ಮತ್ತು ನಡವಳಿಕೆಯ ಬದಲಾವಣೆಗಾಗಿ ಎನ್. ಎಸ್. ಎಸ್. ಸ್ವಯಂ ಸೇವಕರ ತೊಡಗಿಸಿಕೊಳ್ಳುವಿಕೆ ಯೋಜನೆ’ ಕಾರ್ಯಕ್ರಮ ನಡೆಯಿತು. ಕಾಲೇಜಿನ ಎನ್. ಎಸ್. ಎಸ್ ಅಧಿಕಾರಿ ಡಾ. ಸುದೀಪ ಇವರು ಎನ್. ಎಸ್. ಎಸ್. ಮಹತ್ವ ಮತ್ತು ಯೋಜನೆಯ ಬಗ್ಗೆ ಪ್ರಾಸ್ತಾವಿಕವಾಗಿ ವಿವರಿಸಿದರು. […]