ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಥಮ ಸಭೆ: ಗೆಲುವಿಗೆ ಪಣ ತೊಡಲು ಯಶ್ ಪಾಲ್ ಸುವರ್ಣ ಕರೆ
ಬೆಂಗಳೂರು: ಬಿಜೆಪಿ ಮಲ್ಲೇಶ್ವರಂ ಕಚೇರಿಯಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರಥಮ ಸಭೆಯಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಭಾಗವಹಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಾದ್ಯಂತ ಮೋರ್ಚಾದ ಮೂಲಕ ಪಕ್ಷವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಪಕ್ಷದ ಗೆಲುವಿಗೆ ಪಣ ತೊಡುವಂತೆ ಕರೆ ನೀಡಿದರು. ಸಭೆಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಧ್ಯಕ್ಷ ರಘು ಕೌಟಿಲ್ಯ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸಭೆ
ಉಡುಪಿ: ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯು ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಅಮೀನ್ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಒಬಿಸಿ ಮೋರ್ಚಾದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾ ಒಬಿಸಿ ಮೋರ್ಚಾ ಉಸ್ತುವಾರಿ ಅಶೋಕ ಮೂರ್ತಿ ಮಾತನಾಡಿ ಸಂಘಟನಾತ್ಮಕ ವಿಚಾರಗಳ ಕುರಿತು ಸಮಗ್ರ ಮಾಹಿತಿ ನೀಡಿದರು. […]
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಜೆ. ಪಿ. ನಡ್ಡಾಗೆ ಸನ್ಮಾನ
ಬೆಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾರಿಗೆ ಬೆಳ್ಳಿಯ ದೋಣಿಯ ಸ್ಮರಣಿಕೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಡಾ. ಲಕ್ಷ್ಮಣ್ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಸನ್ಮಾನ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯಶ್ ಪಾಲ್ ಸುವರ್ಣ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ […]