ಡಿ.ದೇವರಾಜ ಅರಸು ನಿಗಮದ ವತಿಯಿಂದ ಹೊಲಿಗೆ ಯಂತ್ರ ಸೌಲಭ್ಯ
ಉಡುಪಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಲಿಗೆ ಯಂತ್ರ ವಿತರಣೆ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.dbcdc.karnataka.gov.in, ದೂ.ಸಂಖ್ಯೆ: 080-22374832, 8050770004, 7090400100 ಹಾಗೂ 0820-2574882 ಅನ್ನು ಸಂಪರ್ಕಿಸಬಹುದಾಗಿದೆ […]
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಸಲ್ಲಿಸಿ
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಸಮುದಾಯಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: […]
ಬಾಲಕಿಯರ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ: ಮಹಿಳಾ ತರಬೇತುದಾರರಿಂದ ಅರ್ಜಿ ಆಹ್ವಾನ
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ 6 ಮೆಟ್ರಿಕ್ ಪೂರ್ವ ಹಾಗೂ 14 ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ಕರಾಟೆ, ಜುಡೋ ಹಾಗೂ ಟೈಕ್ವಾಂಡೋಗಳಲ್ಲಿ ವಿಶೇಷ ಪರಿಣಿತಿ ಹೊಂದಿದ ಮಹಿಳಾ ತರಬೇತಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. 40 ವರ್ಷದೊಳಗಿನ, ಬ್ಲ್ಯಾಕ್ ಬೆಲ್ಟ್ ಅರ್ಹತೆ ಹೊಂದಿರುವ, ನೊಂದಾಯಿತ ಕರಾಟೆ ಸಂಘದ ಸದಸ್ಯತ್ವ ಪಡೆದಿರುವ ಅರ್ಹ ಮಹಿಳಾ ತರಬೇತುದಾರರು ಆಗಸ್ಟ್ 5 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. […]
ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ
ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗೆ ಸೇರಿದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574881, 2573881 ಅನ್ನು […]
ಕೋಟ: ಜುಲೈ 8 ರಂದು ಸಮಾಜ ಕಲ್ಯಾಣ ಇಲಾಖೆ ಸಚಿವರಿಂದ ಅಹವಾಲು ಸ್ವೀಕಾರ
ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಜುಲೈ 8 ರಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.