ಇಂದು ಜಗದೊಡೆಯ ಪುರಿ ಜಗನ್ನಾಥನಿಗೆ ರಥಯಾತ್ರೆ ಸಂಭ್ರಮ

ಭುವನೇಶ್ವರ: ಜಗನ್ನಾಥ ರಥ ಯಾತ್ರೆ ಎಂದೂ ಕರೆಯಲ್ಪಡುವ ಪುರಿ ರಥ ಯಾತ್ರೆಯು ಒಡಿಶಾದ ಪುರಿಯಲ್ಲಿ ನಡೆಯುವ ವಾರ್ಷಿಕ ಉತ್ಸವವಾಗಿದೆ. ಇದು ಮಹತ್ವದ ಹಿಂದೂ ಹಬ್ಬವಾಗಿದ್ದು, ಜಗನ್ನಾಥನಾದ ಕೃಷ್ಣ, ಬಲರಾಮ ಮತ್ತು ಸುಭದ್ರೆಯರನ್ನು ಬೃಹತ್ ಶೋಭಾಯಮಾನ ರಥಗಳಲ್ಲಿ ಕುಳ್ಳಿರಿಸಿ ಮೆರವಣಿಗೆಯಲ್ಲಿ ಕರೆದೊಯ್ಯಲಾಗುತ್ತದೆ. ಚಾಂದ್ರಮಾನ ಪಂಚಾಗ ಪದ್ದತಿಯನ್ನು ಆಧರಿಸಿ ಪುರು ಜಗನ್ನಾಥನ ರಥ ಯಾತ್ರೆಯ ದಿನವನ್ನು ನಿಗದಿ ಮಾಡಲಾಗುತ್ತದೆ. ಬಹುತೇಕ ರಥಯಾತ್ರೆಯು ಜೂನ್ ಅಥವಾ ಜುಲೈ ತಿಂಗಳಲ್ಲಿ ನಡೆಯುತ್ತದೆ. ಈ ವರ್ಷ ಇದು ಜೂನ್ 20 ರಂದು ನಡೆಯುತ್ತಿದೆ. ಪುರಿಯ […]

ಒಡಿಶಾ ತ್ರಿವಳಿ ರೈಲು ಅಪಘಾತ: ಎರಡೂ ರೈಲು ಹಳಿಗಳ ದುರಸ್ತಿ ಸಂಪೂರ್ಣ; ಸೇವೆ ಪುನರಾರಂಭ

ಒಡಿಶಾ: 275 ಜನರನ್ನು ಬಲಿತೆಗೆದುಕೊಂಡ ಭೀಕರ ಬಾಲಸೋರ್ ರೈಲು ಅಪಘಾತ ಸಂಭವಿಸಿದ ವಿಭಾಗದಲ್ಲಿ ರೈಲು ಸಂಚಾರ ಪುನರಾರಂಭವಾಗಿದೆ. ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರು ಭಾನುವಾರ ಪ್ರಯಾಣಿಕರು ಮತ್ತು ಸಿಬ್ಬಂದಿಯತ್ತ ಕೈಬೀಸಿದರು ಮತ್ತು ಅವರ ಸುರಕ್ಷಿತ ಪ್ರಯಾಣಕ್ಕಾಗಿ ಪ್ರಾರ್ಥಿಸಿದರು. ಬಾಲಾಸೋರ್‌ನಲ್ಲಿ ನಡೆದ ಭೀಕರ ತ್ರಿವಳಿ ರೈಲು ಅಪಘಾತ ಸಂಭವಿಸಿದ 51 ಗಂಟೆಗಳ ಅವಧಿಯಲ್ಲಿ ಮೇಲಿನ ಮತ್ತು ಕೆಳಗಿನ ಎರಡೂ ರೈಲು ಹಳಿಗಳ ದುರಸ್ತಿ ಸಂಪೂರ್ಣವಾಗಿದ್ದು ಸೇವೆಗಳು ಪುನರಾರಂಭಗೊಂಡಿವೆ. ದುರ್ಘಟನೆಯಲ್ಲಿ275 ಜನ ಸಾವನ್ನಪ್ಪಿದ್ದು 1,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. […]

ಒಡಿಶಾ ರೈಲು ದುರಂತ: ಉಡುಪಿ ಸಾರ್ವಜನಿಕರಿಗಾಗಿ ಸಹಾಯವಾಣಿ

ಉಡುಪಿ : ಒಡಿಶಾ ರಾಜ್ಯದಲ್ಲಿ ರೈಲು ಅಪಘಾತ ಸಂಭವಿಸಿದ್ದು, ಸದ್ರಿ ಅಪಘಾತದಲ್ಲಿ ಉಡುಪಿ ಜಿಲ್ಲೆಗೆ ಸಂಬಂಧಿಸಿದ ಯಾರಾದರೂ ಸಾರ್ವಜನಿಕರು ಸಿಲುಕಿಕೊಂಡಿದ್ದರೆ, ಆ ಬಗ್ಗೆ ಸದ್ರಿಯವರ ಮಾಹಿತಿಯನ್ನು ಸಂಬಂಧಿಸಿದವರು ಕರ್ನಾಟಕ ರಾಜ್ಯ ಸಹಾಯವಾಣಿ ಕೇಂದ್ರ 080-22253707 / 080-22340676 (Toll Free No:1070), ಉಡುಪಿ ಜಿಲ್ಲಾಧಿಕಾರಿ ಕಛೇರಿ (24*7) ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ 0820–2574802 , (Toll Free No:1070), ಸಂಖ್ಯೆಗೆ ದೂರವಾಣಿ ಮೂಲಕ ಕರೆ ಮಾಡಿ ತಿಳಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಒಡಿಶಾ ರೈಲು ದುರ್ಘಟನೆ: ಸಂತ್ರಸ್ತರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯ ಭರವಸೆ

ಭುವನೇಶ್ವರ: ಒಡಿಶಾ ರೈಲು ಅಪಘಾತದಲ್ಲಿ ಗಾಯಗೊಳಗಾದವರನ್ನು ಶನಿವಾರ ಭೇಟಿ ಮಾಡಿದ ಪ್ರಧಾನಿ ಮೋದಿ, ಸಂತ್ರಸ್ತ ಪ್ರಯಾಣಿಕರಿಗೆ ಸಹಾಯ ಮಾಡಲು ಮತ್ತು ಚಿಕಿತ್ಸೆ ನೀಡಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಹೇಳಿದರು. “ಇದೊಂದು ಗಂಭೀರ ಘಟನೆಯಾಗಿದ್ದು, ಪ್ರತಿಯೊಂದು ಕೋನದಿಂದ ತನಿಖೆಗೆ ಸೂಚನೆಗಳನ್ನು ನೀಡಲಾಗಿದೆ. ತಪ್ಪಿತಸ್ಥರು ಕಠಿಣ ಶಿಕ್ಷೆಗೆ ಗುರಿಯಾಗುತ್ತಾರೆ” ಎಂದು ಅವರು ಹೇಳಿದರು. ದುರಂತದಲ್ಲಿ ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸರಕಾರ ಬೆಂಬಲವಾಗಿ ನಿಂತಿದೆ ಎಂದು ಅವರು ಭರವಸೆ ನೀಡಿದರು. ಭುವನೇಶ್ವರದಿಂದ ಉತ್ತರಕ್ಕೆ 170 ಕಿಮೀ ದೂರದಲ್ಲಿರುವ ಬಾಲಸೋರ್ […]

ಒಡಿಸಾ ರೈಲು ಅಪಘಾತ ಪ್ರಕರಣ: ಪರಿಸ್ಥಿತಿ ಅವಲೋಕಿಸಲು ಒಡಿಸಾಗೆ ತೆರಳಿದ ಪ್ರಧಾನಿ ಮೋದಿ

ನವದೆಹಲಿ: ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಮೂರು ರೈಲುಗಳ ಮಧ್ಯೆ ಭೀಕರ ಅಪಘಾತದ ಸ್ಥಳವನ್ನು ಸಮೀಕ್ಷೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ಒಡಿಶಾಗೆ ತೆರಳಿದರು. ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸುಮಾರು 300 ಜನರು ಸಾವನ್ನಪ್ಪಿದ್ದು ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಗ್ಗೆ ವರದಿಗಳಾಗಿವೆ. ವಿವರಗಳ ಪ್ರಕಾರ, ಪ್ರಧಾನಿ ಮೋದಿ ಮೊದಲು ರೈಲು ಅಪಘಾತದ ಸ್ಥಳಕ್ಕೆ ತೆರಳಿ ಸ್ಥಳ ಪರಿಶೀಲನೆ ನಡೆಸಲಿದ್ದು, ಮತ್ತು ನಂತರ ಕಟಕ್‌ನ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳನ್ನು […]