ಮೂಡುಬಿದಿರೆ:ಒಡಿಯೂರು-ನಾಟಕ ಸ್ಪರ್ಧೆಯಲ್ಲಿ ಆಳ್ವಾಸ್‌ನ ಎರಡು ನಾಟಕಗಳಿಗೆ ಪ್ರಶಸ್ತಿ

ಮೂಡುಬಿದಿರೆ: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ ಮತ್ತು ಒಡಿಯೂರು ಗ್ರಾಮೋತ್ಸವದ ಅಂಗವಾಗಿ, ಶ್ರೀಕ್ಷೇತ್ರದ ರಾಜಾಂಗಣದಲ್ಲಿ ನಡೆದ ನಾಟಕ ಸ್ಪರ್ಧೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಎರಡು ನಾಟಕಗಳು ಕ್ರಮವಾಗಿ ಪ್ರಥಮ ಮತ್ತು ದ್ವಿತೀಯ ಪ್ರಶಸ್ತಿಯನ್ನು ಪಡೆದವು. ಡಾ| ಜೀವನ್ ರಾಂ ಸುಳ್ಯ ರಚಿಸಿ, ನಿರ್ದೇಶಿಸಿದ “ದೇವವೃದ್ಧರು” ನಾಟಕವು ಅತ್ಯುತ್ತಮ ನಾಟಕ ಪ್ರಶಸ್ತಿಯೊಂದಿಗೆ ರೂ.50,000 ನಗದು ಬಹುಮಾನ ಹಾಗೂ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿಯನ್ನು ಪಡೆದುಕೊಂಡಿತು. ಇದೇ ನಾಟಕಕ್ಕೆ ಅತ್ಯುತ್ತಮ ಸಂಗೀತ ಸಂಯೋಜಕ ಪ್ರಶಸ್ತಿಯನ್ನು ಆಳ್ವಾಸ್ ಪಿ.ಯು. ವಿದ್ಯಾರ್ಥಿ […]