ಎಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ: 5 ಲಕ್ಷ ರೂ ಮೌಲ್ಯದ ಮೌಲ್ಯದ ಕೊಬ್ಬರಿ, ತೆಂಗಿನಕಾಯಿ ಬೆಂಕಿಗಾಹುತಿ
ಪಡುಬಿದ್ರಿ: ಕಣ್ಣಂಗಾರ್ ಬೈಪಾಸ್ ಬಳಿಯ ನಡ್ಸಾಲು ಗ್ರಾಮದ ಸುಶೀಲಾ ಗಾಣಿಗ ಅವರ ಗಾಣಿಗರ ಎಣ್ಣೆ ಮಿಲ್ ನಲ್ಲಿ ಬುಧವಾರ ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿರುವ ಬಗ್ಗೆ ವರದಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಸುಮಾರು 5 ಲಕ್ಷ ರೂ ಗಳಿಗಿಂತಲೂ ಅಧಿಕ ಮೌಲ್ಯದ ಕೊಬ್ಬರಿ, ತೆಂಗಿನಕಾಯಿ ಬೆಂಕಿಗಾಹುತಿಯಾಗಿ ನಷ್ಟವಾಗಿದೆ. ಮಾಹಿತಿ ತಿಳಿದ ಕೂಡಲೇ ಉಡುಪಿ ಅಗ್ನಿ ಶಾಮಕದಳದವರು ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ರಾತ್ರಿ ಮಾಮೂಲಿನಂತೆ […]