ಒಲಿಂಪಿಕ್ಸ್ ಕುಸ್ತಿ: ಫೈನಲ್ ನಲ್ಲಿ ಸೋತು ಬೆಳ್ಳಿ ಗೆದ್ದ ರವಿಕುಮಾರ್ ದಹಿಯಾ

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್‌ ಕುಸ್ತಿ ವಿಭಾಗದ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ರವಿಕುಮಾರ್ ದಹಿಯಾ ಬೆಳ್ಳಿ ಪದಕ ತನ್ನದಾಗಿಸಿಕೊಂಡಿದ್ದಾರೆ. ಇಂದು ನಡೆದ ಪುರುಷರ 57 ಕೆ.ಜಿ. ವಿಭಾಗದ ಫೈನಲ್‌ನಲ್ಲಿ ರವಿಕುಮಾರ್, ವಿಶ್ವ ಚಾಂಪಿಯನ್‌, ರಷ್ಯಾದ ಜವೂರ್ ಉಗುವೆ ಎದುರು ಸೋಲು ಅನುಭವಿಸಿದರು.