ಒಲಿಂಪಿಕ್ಸ್ ಕುಸ್ತಿ: ರವಿಕುಮಾರ್ ದಹಿಯಾ ಫೈನಲ್‌ಗೆ ಪ್ರವೇಶ

ಟೋಕಿಯೊ: ಭಾರತದ ಕುಸ್ತಿಪಟು ರವಿಕುಮಾರ್ ದಹಿಯಾ ಪುರುಷರ 57 ಕೆ.ಜಿ ವಿಭಾಗದಲ್ಲಿ ಫೈನಲ್‌ಗೆ ಪ್ರವೇಶಿಸಿದ್ದಾರೆ. ಈ ಮೂಲಕ ರವಿಕುಮಾರ್ ಒಲಿಂಪಿಕ್ಸ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಚಿತವಾಗಿದೆ. ಇಂದು ನಡೆದ ಸೆಮಿಫೈನಲ್ ಮುಖಾಮುಖಿಯಲ್ಲಿ ರವಿಕುಮಾರ್ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ವಿರುದ್ಧ ಗೆಲುವು ದಾಖಲಿಸಿದರು ಕಂಚು ಗೆದ್ದ ಭಾರತದ ಬಾಕ್ಸರ್ ಲವ್ಲಿನಾ ಭಾರತದ ಬಾಕ್ಸರ್ ಲವ್ಲಿನಾ ಬೋರ್ಗೊಹೈನ್ ಸೆಮಿಫೈನಲ್‌ನಲ್ಲಿ ಸೋಲು ಅನುಭವಿಸುವ ಮೂಲಕ ಫೈನಲ್‌ಗೆ ಪ್ರವೇಶಿಸುವಲ್ಲಿ ವಿಫಲರಾಗಿದ್ದಾರೆ. ಆದರೆ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. […]