ಕೆ.ಎಂ.ಸಿ ಆಂಕೋಲಜಿ ವಿಭಾಗದಿಂದ ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನ ಆಚರಣೆ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಮಕ್ಕಳ ರಕ್ತ ಶಾಸ್ತ್ರ ಮತ್ತು ಆಂಕೊಲೊಜಿ ವಿಭಾಗವು ಗುರುವಾರ ಮಣಿಪಾಲದ ಡಾ ಟಿಎಂಎ ಪೈ ಹಾಲ್‌ನಲ್ಲಿ ಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನವನ್ನು (ಐಸಿಸಿಡಿ) ಆಚರಿಸಿತು. ಈ ಜಾಗತಿಕ ಆಚರಣೆಯು ಬಾಲ್ಯದ ಕ್ಯಾನ್ಸರ್‌ಗಳ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಕ್ಯಾನ್ಸರ್ ಪೀಡಿತ ಮಕ್ಕಳು, ಅವರ ಆರೈಕೆದಾರರು ಮತ್ತು ಬದುಕುಳಿದವರಿಗೆ ಬೆಂಬಲವನ್ನು ವ್ಯಕ್ತಪಡಿಸುವ ಗುರಿಯನ್ನು ಹೊಂದಿದೆ. ಮುಖ್ಯ ಅತಿಥಿಗಳಾಗಿದ್ದ ಉಡುಪಿ ಜಿಲ್ಲೆಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಐ.ಪಿ.ಗಡದ್ […]