‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ‘ ಯೋಜನೆಯನ್ನು ಜುಲೈ 31ರವರೆಗೆ ಮುಂದುವರಿಸಿ: ಸುಪ್ರೀಂ ಕೋರ್ಟ್

ನವದೆಹಲಿ: ಕೋವಿಡ್–19 ಸೋಂಕಿನ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ದೇಶದ ಎಲ್ಲ ಬಡವರ್ಗದವರಿಗೂ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ‘ ಉಚಿತ ಪಡಿತರ ನೀಡುವ ಯೋಜನೆಯನ್ನು ದೇಶದಾದ್ಯಂತ ಜುಲೈ 31ರವರೆಗೆ ಮುಂದುವರಿಸುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ಕೋವಿಡ್‌ ಎರಡನೇ ಅಲೆಯ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರಿಗೆ ಆಹಾರ ಭದ್ರತೆ, ಮತ್ತಿತರ ಸೌಲಭ್ಯಗಳನ್ನು ನೀಡಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ […]