ಈರುಳ್ಳಿ ಬೆಲೆ ಏರಿಕೆ ಹಿನ್ನೆಲೆ :ಕೇಂದ್ರದಿಂದ ಬಫರ್ ಸ್ಟಾಕ್ ಬಿಡುಗಡೆ ಆರಂಭ 

ನವದೆಹಲಿ: ದೇಶದ ಕೆಲ ಭಾಗಗಳಲ್ಲಿ ಈರುಳ್ಳಿ ಬೆಲೆ ಏರಿಕೆಯಾಗುತ್ತಿರುವ ವರದಿಗಳಿಂದ ಅಲರ್ಟ್​ ಆಗಿರುವ ಕೇಂದ್ರ ಸರ್ಕಾರ ತನ್ನ ಬಫರ್ ಸ್ಟಾಕ್​ನಿಂದ ಈರುಳ್ಳಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಪ್ರಾರಂಭಿಸಿದೆ. ಈ ಮೂಲಕ ಈರುಳ್ಳಿಯ ಬೆಲೆ ಏರಿಕೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರ ತ್ವರಿತವಾಗಿ ಮಧ್ಯ ಪ್ರವೇಶಿಸಿದೆ. ಈರುಳ್ಳಿ ಬೆಲೆಗಳು ಹೆಚ್ಚಾಗಬಹುದು ಎಂಬ ಅಂದಾಜಿನ ಹಿನ್ನೆಲೆಯಲ್ಲಿ ತಕ್ಷಣ ಕಾರ್ಯಪ್ರವೃತ್ತವಾಗಿರುವ ಕೇಂದ್ರ ಸರ್ಕಾರ, ಈರುಳ್ಳಿ ಬಫರ್ ಸ್ಟಾಕ್​ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾರಂಭಿಸಿದೆ. ಸರ್ಕಾರದ ಕೃಷಿ ಮಾರುಕಟ್ಟೆ ಏಜೆನ್ಸಿಗಳಾದ ರಾಷ್ಟ್ರೀಯ ಕೃಷಿ ಸಹಕಾರ […]