ಜನವರಿಯಿಂದ ಆನ್‍ಲೈನ್‍ನಲ್ಲಿ ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಆರಂಭ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಸಾರ್ವಜನಿಕರು ಜನವರಿ ತಿಂಗಳಿನಿಂದ ಆಯ್ದ ಇಲಾಖೆಗಳಲ್ಲಿ ಆನ್‍ಲೈನ್ ಮೂಲಕ ಸಹ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿ, ಆನ್‍ಲೈನ್ ಮೂಲಕವೇ ಹಣ ಪಾವತಿಸಿ, ಆನ್‍ಲೈನ್ ಮೂಲಕವೇ ತಮಗೆ ಬೇಕಾದ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಸೋಮವಾರ, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಆನ್‍ಲೈನ್ ಮೂಲಕ ಮಾಹಿತಿ ಹಕ್ಕು ಅರ್ಜಿ ಸಲ್ಲಿಕೆ ಕುರಿತು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಆನ್‍ಲೈನ್‍ನಲ್ಲಿ ಮಾಹಿತಿ ಹಕ್ಕು ವ್ಯವಸ್ಥೆಯನ್ನು ಜಾರಿಗೆ […]