ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನ

ತಿರುವನಂತಪುರಂ: ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ನಿಧನರಾಗಿದ್ದಾರೆ ಎಂದು ಮಂಗಳವಾರ ಅವರ ಕುಟುಂಬ ಮತ್ತು ಕೇರಳ ಕಾಂಗ್ರೆಸ್ ಅಧ್ಯಕ್ಷ ಕೆ ಸುಧಾಕರನ್ ಘೋಷಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಎರಡು ಬಾರಿ ಕೇರಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಚಾಂಡಿ ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾದರು ಎಂದು ಅವರ ಕುಟುಂಬ ಘೋಷಿಸಿತು. ಕೇರಳದ ಮಾಜಿ ಮುಖ್ಯಮಂತ್ರಿ ನಿಧನದ ಸುದ್ದಿಯನ್ನು ಅವರ ಪುತ್ರ ಚಾಂಡಿ ಉಮ್ಮನ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಕಟಿಸಿದ್ದಾರೆ. ಕೆಲ ದಿನಗಳಿಂದ […]