ಸೆ. 26ಕ್ಕೆ ಮಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನಾ ಸಮಾರಂಭ
ಕಟಪಾಡಿ: ಮಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ರಥಬೀದಿಯ ಕಾಂಕ್ರಿಟೀಕರಣದ ಉದ್ಘಾಟನಾ ಸಮಾರಂಭ ನಾಳೆ (ಸೆ. 26) ಬೆಳಿಗ್ಗೆ 10.30ಕ್ಕೆ ನಡೆಯಲಿದೆ. ಎಂಸಿಎಫ್ ಮಂಗಳೂರು ಹಾಗೂ ಕರ್ಣಾಟಕ ಬ್ಯಾಂಕ್ ನ ಪ್ರಾಯೋಜಕತ್ವದಲ್ಲಿ ನಿರ್ಮಿಸಲಾಗಿರುವ ಕಾಂಕ್ರಿಟೀಕರಣದ ಉದ್ಘಾಟನೆಯನ್ನು ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಎಜಿಎಂ ಗೋಪಾಲಕೃಷ್ಣ ಬಿ. ಸಾಮಗ ಅವರು ನೆರವೇರಿಸುವರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಸದಸ್ಯೆ ಗೀತಾಂಜಲಿ ಸುವರ್ಣ, ತಾಲ್ಲೂಕು ಪಂಚಾಯತ್ […]