ಎಲ್ಐಸಿ ಉಡುಪಿ ವಿಭಾಗದ 65ನೇ ವಿಮಾ ಸಪ್ತಾಹದ ಉದ್ಘಾಟನೆ
ಉಡುಪಿ: ಭಾರತೀಯ ಜೀವ ವಿಮಾ ನಿಗಮ (ಎಲ್ಐಸಿ)ದ ಉಡುಪಿ ವಿಭಾಗೀಯ ಕಚೇರಿಯಲ್ಲಿ 65ನೇ ವಿಮಾ ಸಪ್ತಾಹದ ಉದ್ಘಾಟನಾ ಸಮಾರಂಭ ಬುಧವಾರ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ವಿಭಾಗದ ಹಿರಿಯ ವಿಭಾಗಾಧಿಕಾರಿ ಬಿಂದು ರಾಬರ್ಟ್ ಮಾತನಾಡಿ, ಕ್ಲೈಮ್ ಸೆಟ್ಲ್‌ಮೆಂಟ್‌ನಲ್ಲಿ ಮಂಚೂಣಿಯಲ್ಲಿರುವ ನಿಗಮವು, ಕೋವಿಡ್ ಸಮಯದಲ್ಲಿಯೂ ತನ್ನ ಹಿರಿತನವನ್ನು ಉಳಿಸಿಕೊಂಡಿದೆ. ಮಾಹಿತಿ ತಂತ್ರಜ್ಞಾನವನ್ನು ಅಳವಡಿಸಿ ಕೊಳ್ಳುವುದರಲ್ಲಿ ಅಗ್ರಗಣ್ಯನೆಂದೆನಿಸಿಕೊಂಡಿರುವ ನಿಗಮವು, ಪಾಲಿಸಿದಾರರಿಗೆ ಹಾಗೂ ಪ್ರತಿನಿಧಿಗಳಿಗೆ ಅನುಕೂಲವಾಗಿರುವ ಆನಂದ್ ಆ್ಯಪ್‌ಅನ್ನು ಅಭಿವೃದ್ಧಿ ಪಡಿಸಿ ಅಳವಡಿಸಿಕೊಂಡಿರುವುದು ಈ ವರ್ಷದ ಹೆಗ್ಗಳಿಕೆಗಳಲ್ಲೊಂದಾಗಿದೆ ಎಂದರು. ಇದೇ ಸಂದರ್ಭದಲ್ಲಿ […]