ಯಕ್ಷಗಾನ ಕಲಿಕಾ ತರಗತಿ ಉದ್ಘಾಟನೆ

ಉಡುಪಿ: ಯಕ್ಷಗಾನ ನೃತ್ಯ ಕಲಿಕೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ. ಬದುಕಿನಲ್ಲಿ ಶಿಸ್ತು ಕಲಿಸುತ್ತದೆ ಎಂದು ಅಂಬಲಪಾಡಿ ಲಕ್ಷ್ಮೀ ಜನಾರ್ದನ ದೇವಳದ ಧರ್ಮದರ್ಶಿ ಡಾ. ನಿ.ಬೀ. ವಿಜಯ ಬಲ್ಲಾಳ್ ಅಭಿಪ್ರಾಯಪಟ್ಟರು. ಅವರು ಅಂಬಲಪಾಡಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿಯ ನೂತನ ಕಟ್ಟಡ ‘ಶ್ರೀ ಜನಾರ್ದನ ಮಂಟಪ’ದಲ್ಲಿ ಜ್ಯೋತಿ ಬೆಳಗಿಸಿ ಯಕ್ಷಗಾನ ಕಲಿಕಾ ತರಗತಿ ಉದ್ಘಾಟಿಸಿ ಮಾತನಾಡಿದರು. ನೂತನ ಕಟ್ಟಡಕ್ಕೆ ಅಗತ್ಯವಿರುವ ಮೂಲ ಸೌಕರ್ಯ ಮತ್ತು ಪೀಠೋಪಕರಣಗಳ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಯಕ್ಷಗಾನ ಕಲಾರಂಗದ […]