ಉಡುಪಿ ಕಾರ್ಮಿಕ ಇಲಾಖೆ ಮತ್ತು ಚಿನ್ನ ಬೆಳ್ಳಿ ಆಭರಣ ತಯಾರಿಕಾ ಕಾರ್ಮಿಕರ ಸಹಯೋಗದಿಂದ ಪಿಂಚಣಿ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ

ಉಡುಪಿ, ಮಾ.7: ಕಾರ್ಮಿಕ ಇಲಾಖೆ ಉಡುಪಿ ಮತ್ತು ಚಿನ್ನ ಬೆಳ್ಳಿ ಆಭರಣ ತಯಾರಿಕಾ ಕಾರ್ಮಿಕರು, ವ್ಯವಹಾರ ಕಾಂಪ್ಲೇಕ್ಸ್, ವಳಕಾಡು, ಉಡುಪಿ ಇವರ ಸಹಯೋಗದೊಂದಿಗೆ ವಳಕಾಡು ವ್ಯವಹಾರ ಕಾಂಪ್ಲೆಕ್ಸ್ನಲ್ಲಿ ಪಿಂಚಣಿ ಸಪ್ತಾಹ ಉದ್ಘಾಟನಾ ಕಾರ್ಯಕ್ರಮ ಮತ್ತು ನೋಂದಣಿ ಶಿಬಿರ ಇಂದು ನಡೆಯಿತು. ಹಿರಿಯ ಸಿವಿಲ್ ನ್ಯಾಯಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಪಿಂಚಣಿ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್- ಧನ್ ಯೋಜನೆಯು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 18 ವರ್ಷದಿಂದ […]