ಉಡುಪಿ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 73.39 ಲಕ್ಷ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ವಶ, ನಾಲ್ವರ ಬಂಧನ
ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿದ್ದ ಡ್ರಗ್ಸ್ ಚಟುವಟಿಕೆಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಪ್ರಮುಖ ಮೂರು ಪ್ರಕರಣಗಳಲ್ಲಿ ಬರೋಬ್ಬರಿ 73,39,500 ರೂ. ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ನ್ನು ವಶಪಡಿಸಿಕೊಳ್ಳಲಾಗಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ ತಿಳಿಸಿದ್ದಾರೆ. ಉಡುಪಿ ಎಸ್ಪಿ ಕಚೇರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪ್ರಸ್ತಕ ವರ್ಷದಲ್ಲಿ ಗಾಂಜಾ ಸೇವನೆ ಹಾಗೂ ಸಾಗಾಟಕ್ಕೆ ಸಂಬಂಧಿಸಿದಂತೆ 209 ಪ್ರಕರಣಗಳು ದಾಖಲಾಗಿವೆ. ಇದು ಕಳೆದ ಐದು ವರ್ಷಗಳಲ್ಲಿ ದಾಖಲಿಸಿದ ಅತೀ ಹೆಚ್ಚು […]