ನಾಳೆಯಿಂದ ಧಾರ್ಮಿಕ ಸ್ಥಳಗಳಲ್ಲಿ‌ ಸೇವೆಗೆ ಅವಕಾಶ: ಜಾತ್ರೆ, ಮೆರವಣಿಗೆಗೆ ಅವಕಾಶವಿಲ್ಲ

ಬೆಂಗಳೂರು: ಕೋವಿಡ್‌ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಭಾನುವಾರದಿಂದ (ಜುಲೈ 25) ಧಾರ್ಮಿಕ ಸ್ಥಳಗಳಲ್ಲಿ ಭಕ್ತರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿ ಕಂದಾಯ ಇಲಾಖೆ ಶನಿವಾರ ಆದೇಶ ಹೊರಡಿಸಿದೆ. ಅದರಂತೆ ನಾಳೆಯಿಂದ ದೇವಸ್ಥಾನ, ಮಸೀದಿ, ಚರ್ಚ್‌, ಗುರುದ್ವಾರ ಸೇರಿದಂತೆ ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಲ್ಲಿ ಭಕ್ತರು ಸೇವೆ ಸಲ್ಲಿಸಬಹುದಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಸಲ್ಲಿಸಲು ಅವಕಾಶ ನೀಡಿ ಜುಲೈ ಮೊದಲ ವಾರ ಆದೇಶ ಹೊರಡಿಸಲಾಗಿತ್ತು. ಆದರೆ, ಯಾವುದೇ ರೀತಿಯ ಪೂಜೆ ಅಥವಾ ಸೇವೆ ಸಲ್ಲಿಸಲು ಅವಕಾಶ ಇರಲಿಲ್ಲ. ಇದೀಗ […]