ಕೊರೊನಾ ಪಾಸಿಟಿವ್ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ

ಉಡುಪಿ: ಸೆಪ್ಟೆಂಬರ್ 7ರಿಂದ 19ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೊಂದಾಯಿಸಿಕೊಂಡ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡರು ಸಹ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಉಡುಪಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಭಗವಂತ ಕಟ್ಟಿಮನಿ ತಿಳಿಸಿದ್ದಾರೆ. ಕೊರೊನಾ ಸೋಂಕು ಕಂಡುಬರುವ ವಿದ್ಯಾರ್ಥಿಗಳಿಗೆ ಬನ್ನಂಜೆ ಬಾಲಕಿಯರ ವಸತಿ ನಿಲಯ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿರುವ ಪ್ರತ್ಯೇಕ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ. ಸೋಂಕು ಇದ್ದರೆ ಮೊದಲೇ ತಿಳಿಸಿ: ಪರೀಕ್ಷೆ […]